ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನ ನನಗೆ ಆಶೀರ್ವಾದ ಮಾಡುತ್ತಾರೆ ಎಂದು ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ಚುನಾವಣೆಯಲ್ಲಿ ಯಾರಿಗೂ ಕೂಡ ವಯಸ್ಸಿನ ಲೆಕ್ಕ ಬರಲ್ಲ. ನನ್ನ ತಂದೆ ಈ ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳನ್ನು ಕೈಗೊಂಡಿದ್ದರು. ಹಾಗಾಗಿ ಈ ಬಾರಿಯೂ ಕ್ಷೇತ್ರದ ಜನತೆ ನನಗೆ ಆಶೀರ್ವಾದ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಚನ್ನಪಟ್ಟಣ ಕ್ಷೇತ್ರ ಉಪಚುನಾವಣೆ ಪ್ರಚಾರಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರೂ ಸಹ ಬರುತ್ತಾರೆ. ಅವರ ಜೊತೆಗೆ ಎನ್‌ಡಿಎ ನಾಯಕರು ಕೂಡ ಪ್ರಚಾರ ಕೈಗೊಳ್ಳಲಿದ್ದಾರೆ. ಎನ್‌ಡಿಎ ಸರ್ಕಾರದ ಅಭಿವೃದ್ಧಿ ಕೆಲಸಗಳನ್ನು ನೋಡಿ ಜನ ನಮ್ಮ ಕೈ ಹಿಡಿಯುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.