Mysore
19
scattered clouds

Social Media

ಮಂಗಳವಾರ, 17 ಫೆಬ್ರವರಿ 2026
Light
Dark

ಚನ್ನಪಟ್ಟಣ ಉಪಚುನಾವಣೆ ಟಿಕೆಟ್‌ ಬಗ್ಗೆ ವರಿಷ್ಠರ ತೀರ್ಮಾನ: ನಿಖಿಲ್‌ ಕುಮಾರಸ್ವಾಮಿ

ಚನ್ನಪಟ್ಟಣ: ಚನ್ನಪಟ್ಟಣ ಕ್ಷೇತ್ರಕ್ಕೆ ಉಪಚುನಾವಣೆ ದಿನಾಂಕ ಘೋಷಣೆಯಾಗುವವರೆಗೂ ಟಿಕೆಟ್‌ ಬಗ್ಗೆ ತೀರ್ಮಾನ ಮಾಡಲ್ಲ ಎಂದು ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ.

ಈ ಬಗ್ಗೆ ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಟಿಕೆಟ್‌ ಕುರಿತು ಬಿಜೆಪಿ-ಜೆಡಿಎಸ್‌ ವರಿಷ್ಠರು ದೆಹಲಿಯಲ್ಲಿ ತೀರ್ಮಾನ ಮಾಡುತ್ತಾರೆ. ಅಲ್ಲಿಯವರೆಗೂ ಎಲ್ಲರೂ ಕಾಯಲೇಬೇಕು ಎಂದು ಹೇಳಿದರು.

ನಾನು ಹಾಗೂ ಸಿ.ಪಿ.ಯೋಗೇಶ್ವರ್‌ ಅವರು ಪ್ರತ್ಯೇಕವಾಗಿ ಸಭೆ ನಡೆಸುತ್ತಾ ಪಕ್ಷ ಸಂಘಟನೆಯಲ್ಲಿ ತೊಡಗಿದ್ದೇವೆ. ಅವರು ಬಿಜೆಪಿ-ಜೆಡಿಎಸ್‌ ಒಗ್ಗಟ್ಟಾಗಿ ಚುನಾವಣೆ ಎದುರಿಸುತ್ತೇವೆ ಎಂದಿದ್ದಾರೆ. ಹೀಗಾಗಿ ಯಾರಿಗೂ ಅಸಮಾಧಾನ ಅನ್ನೋದೆ ಇಲ್ಲ ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ರಾಜ್ಯದಲ್ಲಿ ಬರೀ ಓಲೈಕೆ ರಾಜಕಾರಣ ನಡೆಯುತ್ತಿದೆ. ಇದಕ್ಕೆ ಜನರೇ ಮುಂದಿನ ದಿನಗಳಲ್ಲಿ ಉತ್ತರ ಕೊಡುತ್ತಾರೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರದ ಬೊಕ್ಕಸ ಖಾಲಿಯಾಗಿದೆ. ಆದ್ದರಿಂದ ಎಲ್ಲಿಯೂ ಕೂಡ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ ಎಂದು ಕಿಡಿಕಾರಿದರು.

Tags:
error: Content is protected !!