ಚನ್ನಪಟ್ಟಣ: ಚನ್ನಪಟ್ಟಣ ಕ್ಷೇತ್ರಕ್ಕೆ ಉಪಚುನಾವಣೆ ದಿನಾಂಕ ಘೋಷಣೆಯಾಗುವವರೆಗೂ ಟಿಕೆಟ್ ಬಗ್ಗೆ ತೀರ್ಮಾನ ಮಾಡಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಈ ಬಗ್ಗೆ ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಟಿಕೆಟ್ ಕುರಿತು ಬಿಜೆಪಿ-ಜೆಡಿಎಸ್ ವರಿಷ್ಠರು ದೆಹಲಿಯಲ್ಲಿ ತೀರ್ಮಾನ ಮಾಡುತ್ತಾರೆ. ಅಲ್ಲಿಯವರೆಗೂ ಎಲ್ಲರೂ ಕಾಯಲೇಬೇಕು ಎಂದು ಹೇಳಿದರು.
ನಾನು ಹಾಗೂ ಸಿ.ಪಿ.ಯೋಗೇಶ್ವರ್ ಅವರು ಪ್ರತ್ಯೇಕವಾಗಿ ಸಭೆ ನಡೆಸುತ್ತಾ ಪಕ್ಷ ಸಂಘಟನೆಯಲ್ಲಿ ತೊಡಗಿದ್ದೇವೆ. ಅವರು ಬಿಜೆಪಿ-ಜೆಡಿಎಸ್ ಒಗ್ಗಟ್ಟಾಗಿ ಚುನಾವಣೆ ಎದುರಿಸುತ್ತೇವೆ ಎಂದಿದ್ದಾರೆ. ಹೀಗಾಗಿ ಯಾರಿಗೂ ಅಸಮಾಧಾನ ಅನ್ನೋದೆ ಇಲ್ಲ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ರಾಜ್ಯದಲ್ಲಿ ಬರೀ ಓಲೈಕೆ ರಾಜಕಾರಣ ನಡೆಯುತ್ತಿದೆ. ಇದಕ್ಕೆ ಜನರೇ ಮುಂದಿನ ದಿನಗಳಲ್ಲಿ ಉತ್ತರ ಕೊಡುತ್ತಾರೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರದ ಬೊಕ್ಕಸ ಖಾಲಿಯಾಗಿದೆ. ಆದ್ದರಿಂದ ಎಲ್ಲಿಯೂ ಕೂಡ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ ಎಂದು ಕಿಡಿಕಾರಿದರು.
ಮಂಡ್ಯ: ರಾಷ್ಟ್ರದ ಜಿಡಿಪಿಯಲ್ಲಿ ಕೃಷಿ ಪಾಲು ಶೇ.೨೦ ರಷ್ಟು ಇದ್ದು, ಶೇ.೬೦ ರಷ್ಟು ಜನರು ಕೃಷಿ ಅವಲಂಭಿಸಿದ್ದಾರೆ. ಆದ್ದರಿಂದ ರಾಷ್ರ್ಟದ…
ಕುವೈತ್/ನವದೆಹಲಿ: 26ನೇ ಅರೇಬಿಯನ್ ಗಲ್ಫ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದು, ಕುವೈತ್ ದೊರೆ ಶೇಖ್ ಮಿಶಾಲ್…
371 J ಕೊಡುಗೆಯಾಗಿ 371 ಬೆಡ್ ಗಳ ಆಸ್ಪತ್ರೆ: ಸಿಎಂ ಕಲಬುರಗಿ: ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಉದ್ದೇಶ…
‘ಅಂಬೇಡ್ಕರ್ ಅಂಬೇಡ್ಕರ್ ಎನ್ನುವುದು ಈಗ ಒಂದು ಫ್ಯಾಶನ್ ಆಗಿಬಿಟ್ಟಿದೆ. ಹೀಗೆ ಹೇಳುವವರು ಭಗವಂತನ ಹೆಸರನ್ನಾದರೂ ಇಷ್ಟು ಬಾರಿ ಸ್ಮರಿಸಿದ್ದರೆ ಅವರಿಗೆ…
ರಸ್ತೆ ಬದಿಯೇ ಕಸದ ವಾಹನ ನಿಲುಗಡೆಗೊಳಿಸಬೇಕಾದ ಪರಿಸ್ಥಿತಿ; ದುರ್ವಾಸನೆಯಿಂದ ಸಾರ್ವಜನಿಕರಿಕೆ ಕಿರಿಕಿರಿ ಕೃಷ್ಣ ಸಿದ್ದಾಪುರ ಸಿದ್ದಾಪುರ: ಪಟ್ಟಣದಲ್ಲಿ ಕಸ ವಿಲೇವಾರಿ…
ಭೇರ್ಯ: ಸಂಜೆ ನಂತರ ನಿಲ್ದಾಣದೊಳಗೆ ಬಾರದ ಬಸ್‌ಗಳು; ಕುಡಿಯುವ ನೀರು, ಪಾರ್ಕಿಂಗ್ ವ್ಯವಸ್ಥೆ ಇಲ್ಲ ಭೇರ್ಯ ಮಹೇಶ್ ಭೇರ್ಯ: ಗ್ರಾಮದ…