Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಚನ್ನಪಟ್ಟಣದಲ್ಲಿ ನಾಮಪತ್ರ ಸಲ್ಲಿಸಿದ ಸಿ.ಪಿ.ಯೋಗೇಶ್ವರ್

ಚನ್ನಪಟ್ಟಣ: ಚನ್ನಪಟ್ಟಣ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್‌ ಅವರಿಂದು ನಾಮಪತ್ರ ಸಲ್ಲಿಸಿದರು.

ಇಂದು ಬೆಳಿಗ್ಗೆ ಬಸವನಗುಡಿಯಲ್ಲಿ ಪೂಜೆ ಸಲ್ಲಿಸಿ ನಂತರ ಬೃಹತ್‌ ರೋಡ್‌ ಶೋ ನಡೆಸಿದ ಸಿ.ಪಿ.ಯೋಗೇಶ್ವರ್‌ ಅವರು, ನಂತರ ಚನ್ನಪಟ್ಟಣ ತಾಲ್ಲೂಕು ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.

ಈ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಸೇರಿದಂತೆ ಹಲವು ಕಾಂಗ್ರೆಸ್‌ ನಾಯಕರು ಉಪಸ್ಥಿತರಿದ್ದರು.

ಇನ್ನು ಚನ್ನಪಟ್ಟಣ ಕ್ಷೇತ್ರವು ತೀವ್ರ ಜಿದ್ದಾಜಿದ್ದಿನ ಕಣವಾಗಿದ್ದು, ಮೈತ್ರಿ ನಾಯಕರೂ ಕೂಡ ಪಕ್ಷದ ಗೆಲುವಿಗೆ ಅಪಾರ ಶ್ರಮ ವಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಚನ್ನಪಟ್ಟಣ ಕಣದಲ್ಲಿ ಯಾರು ಗೆಲುವಿನ ನಗೆ ಬೀರಲಿದ್ದಾರೆ ಎಂಬುದೇ ಭಾರೀ ಕುತೂಹಲ ಮೂಡಿಸಿದೆ.

Tags: