ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಪ್ರತಿಷ್ಠೆಗೆ ಅವರ ಮಗ ನಿಖಿಲ್‌ರನ್ನು ಬಲಿಕೊಟ್ಟಿದ್ದಾರೆ ಎಂದು ನೂತನ ಶಾಸಕ ಸಿ.ಪಿ.ಯೋಗೇಶ್ವರ್ ಲೇವಡಿ ಮಾಡಿದ್ದಾರೆ.
ಚನ್ನಪಟ್ಟಣದಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು. ಕುಮಾರಸ್ವಾಮಿ ಮನಸ್ಸು ಮಾಡಿದ್ದರೆ ಮಗನನ್ನು ಮಂಡ್ಯದಲ್ಲಿ ಎಂಪಿ ಚುನಾವಣೆಯಲ್ಲಿ ನಿಲ್ಲಿಸಿ ಗೆಲ್ಲಿಸಬಹುದಿತ್ತು. ಆದರೆ, ಕೇಂದ್ರ ಸಚಿವರಾಗುವ ತವಕದಿಂದ ತಾವೇ ಅಲ್ಲಿ ಸ್ಪರ್ಧಿಸಿದ್ದರು. ಈಗ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡುವಂತೆ ಒತ್ತಾಯಿಸಿ ಮಗನನ್ನು ಬಲಿಕೊಟ್ಟಿದ್ದಾರೆ ಎಂದು ಟೀಕಿಸಿದರು.
ಇನ್ನು ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ಸೋಲಿನ ಮೂಲಕ ಜೆಡಿಎಸ್ ಕೊನೆಯ ದಿನಗಳನ್ನು ಎಣಿಸುತ್ತಿದೆ ಎಂದರು.
ದೇವೇಗೌಡರಿಗೆ ವಯಸ್ಸಾಗಿದೆ. ಆದ್ದರಿಂದ ಅವರನ್ನು ಜನ ತಿರಸ್ಕರಿಸಿದ್ದಾರೆ. ಈಗ ದೇವೇಗೌಡರು ವಿಶ್ರಾಂತ ಜೀವನ ನಡೆಸುವುದು ಸೂಕ್ತ ಎಂದರು.
ನಾನು ಈ ಹಿಂದೆ ಲೋಕಸಭೆ ಚುನಾವಣೆಯಲ್ಲಿ ಡಾ.ಮಂಜುನಾಥ್ ಪರ ಕೆಲಸ ಮಾಡಿದ್ದೆ. ಅದರಿಂದಾಗಿ ಡಿ.ಕೆ.ಸುರೇಶ್‌ಗೆ ಸೋಲಾಗಿತ್ತು. ಆದರೆ ಈ ಚುನಾವಣೆಯಲ್ಲಿ ಅವರಿಂದಲೇ ನನಗೆ ಗೆಲುವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಮಂಡ್ಯ : ಪೌತಿ ಖಾತಾ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ಮುಂದಿನ ಆರು ತಿಂಗಳುಗಳೊಳಗೆ ಪೌತಿ ಖಾತಾ ಆಂದೋಲನದಲ್ಲಿ ಯಾವುದೇ…
ಬೆಂಗಳೂರು : ಉದ್ಯೋಗ ಖಾತರಿಯನ್ನು ಇಲ್ಲವಾಗಿಸುವ ಮತ್ತು ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವ್ಯತಿರಿಕ್ತವಾಗಿರುವ ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು…
ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್ ರಿಲೀಫ್…
ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…
ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…
ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…