ಚನ್ನಪಟ್ಟಣ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣ ರಂಗೇರಿದ್ದು, ಅಭ್ಯರ್ಥಿ ಯಾರಾಗ್ತಾರೆ ಎಂಬುದೇ ಈಗ ತೀವ್ರ ಕುತೂಹಲ ಮೂಡಿಸಿದೆ.
ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಗೆ ದಿನಾಂಕ ಘೋಷಣೆ ಆಗಿಲ್ಲ. ಆದರೂ ಕೂಡ ಎಲ್ಲಾ ಪಕ್ಷಗಳು ಚುನಾವಣೆ ಬಗ್ಗೆ ತಲೆಕೆಡಿಸಿಕೊಂಡು ಹೇಗಾದರೂ ಮಾಡಿ ಚನ್ನಪಟ್ಟಣದಲ್ಲಿ ಗೆಲ್ಲಲೇಬೇಕು ಎಂದು ಹಠ ಹಿಡಿದು ಕುಳಿತಿವೆ.
ಹೀಗಿರುವಾಗ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಯಾರಾಗ್ತಾರೆ ಎಂಬುದೇ ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಬಿಜೆಪಿಯಿಂದ ಸಿ.ಪಿ.ಯೋಗೇಶ್ವರ್ ಹೆಸರು ಮುಂಚೂಣಿಯಲ್ಲಿದ್ದು, ಜೆಡಿಎಸ್‌ನಿಂದ ನಿಖಿಲ್ ಕುಮಾರಸ್ವಾಮಿ ಹೆಸರು ಮುನ್ನಲೆಗೆ ಬಂದಿದೆ. ಹೀಗಾಗಿ ಯಾರು ಕ್ಷೇತ್ರದ ಅಭ್ಯರ್ಥಿಯಾಗಲಿದ್ದಾರೆ ಎಂಬುದೇ ಈಗ ಎಲ್ಲರ ಪ್ರಶ್ನೆಯಾಗಿದೆ.
ಇನ್ನೇನು ಕೆಲವೇ ದಿನಗಳಲ್ಲಿ ಬಿಜೆಪಿ ಹೈಕಮಾಂಡ್ ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ ಮಾಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಮೈತ್ರಿ ಟಿಕೆಟ್ ಸಿಗದಿದ್ದರೆ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರು, ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಎಲ್ಲಾ ಮುನ್ಸೂಚನೆಗಳು ಕಾಣಿಸುತ್ತಿವೆ.
ಈ ಹಿನ್ನೆಲೆಯಲ್ಲಿ ಚನ್ನಪಟ್ಟಣ ಉಪಚುನಾವಣೆಗೆ ಹೈಕಮಾಂಡ್ ಅಳೆದು ತೂಗಿ ಅಭ್ಯರ್ಥಿಯನ್ನು ಘೋಷಣೆ ಮಾಡುವ ಸಾಧ್ಯತೆಯಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…