ಚನ್ನಪಟ್ಟಣ: ಚನ್ನಪಟ್ಟಣ ಉಪಚುನಾವಣೆ ಕಣ ರಂಗೇರುತ್ತಿದ್ದು, ಕ್ಷೇತ್ರದ ಟಿಕೆಟ್ ಪಡೆಯಲು ಬಿಜೆಪಿ-ಜೆಡಿಎಸ್ ಮುಖಂಡರು ಪೈಪೋಟಿ ನಡೆಸುತ್ತಿದ್ದಾರೆ.
ಚನ್ನಪಟ್ಟಣ ಉಪಚುನಾವಣೆಗೆ ಮೈತ್ರಿ ಕಗ್ಗಂಟು ಮುಂದುವರಿದಿದ್ದು, ತಮ್ಮ ಪಕ್ಷಕ್ಕೆ ಟಿಕೆಟ್ ಪಡೆಯಲು ಬಿಜೆಪಿ-ಜೆಡಿಎಸ್ ಮುಖಂಡರು ತೀವ್ರ ಪೈಪೋಟಿ ನಡೆಸುತ್ತಿದ್ದಾರೆ.
ಇದೀಗ ಉಪಚುನಾವಣೆ ಘೋಷಣೆಗೂ ಮೊದಲೇ ಮೈತ್ರಿ ಪಕ್ಷದಲ್ಲಿ ಬಿರುಕು ಮೂಡಿದ್ದು, ಜೆಡಿಎಸ್ ಮುಖಂಡರು ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಗೆ ಒತ್ತಾಯಿಸಿದರೆ, ಬಿಜೆಪಿ ಮುಖಂಡರು ಸಿ.ಪಿ.ಯೋಗೇಶ್ವರ್ ಪರ ಬ್ಯಾಟ್ ಬೀಸಿದ್ದಾರೆ.
ಇನ್ನೂ ಕ್ಷೇತ್ರವನ್ನು ತಮ್ಮ ತೆಕ್ಕೆಯಲ್ಲೇ ಉಳಿಸಿಕೊಳ್ಳಲು ಪ್ಲಾನ್ ಮಾಡಿರುವ ಜೆಡಿಎಸ್ ಮುಖಂಡರು ನಿಖಿಲ್ ಕುಮಾರಸ್ವಾಮಿಯನ್ನು ಕಣಕ್ಕಿಳಿಸಲು ಒತ್ತಾಯ ಮಾಡುತ್ತಿದ್ದಾರೆ. ಈ ಬೆನ್ನಲ್ಲೇ ಸಿ.ಪಿ.ಯೋಗೇಶ್ವರ್ ಅವರು, ಎನ್‌ಡಿಎ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದಾರೆ.
ಈ ಎಲ್ಲಾ ಬೆಳವಣಿಗೆಗಳ ನಡುವೆ ಕೇಂದ್ರ ಸಚಿವ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಅವರು ಮೌನ ವಹಿಸಿದ್ದು, ಉಪಚುನಾವಣೆಗೆ ಇನ್ನೂ ದಿನಾಂಕವೇ ಘೋಷಣೆಯಾಗಿಲ್ಲ ಎಂದು ಏನನ್ನೂ ಯೋಚಿಸದೇ ಅಭಿವೃದ್ಧಿ ಕೆಲಸಗಳತ್ತ ಚಿತ್ತ ಹರಿಸಿದ್ದಾರೆ.
ಚನ್ನಪಟ್ಟಣ ಉಪಚುನಾವಣೆಗೆ ದಿನಾಂಕ ಘೋಷಣೆಯಾದರಷ್ಟೇ, ಕ್ಷೇತ್ರಕ್ಕೆ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬುದನ್ನು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಕೂತು ಚರ್ಚೆ ನಡೆಸಿ ಒಮ್ಮತದ ನಿಲುವಿಗೆ ಬರಲಿದ್ದಾರೆ ಎನ್ನಲಾಗಿದೆ.