ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇಂದು ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಅಬ್ಬರದ ಪ್ರಚಾರ ನಡೆಸಿದರು.
ಪ್ರಚಾರದ ವೇಳೆ ಮಾತನಾಡಿದ ಸಂಸದ ಯದುವೀರ್ ಒಡೆಯರ್, ಇದು ರಾಜ್ಯದ ಭವಿಷ್ಯ ರೂಪಿಸುವ ಉಪಚುನಾವಣೆ. ಹಾಗಾಗಿ ಯುವನಾಯಕ ನಿಖಿಲ್ ಅವರಿಗೆ ಮತ ನೀಡಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಕಳೆದ ಹತ್ತು ವರ್ಷಗಳಿಂದ ಪ್ರಧಾನಿ ಮೋದಿ ಅವರು ಉತ್ತಮ ಆಡಳಿತ ನೀಡುತ್ತಾ ಬಂದಿದ್ದಾರೆ. ಇನ್ನೊಂದೆಡೆ ರಾಜ್ಯದಲ್ಲಿ ಆರ್ಥಿಕತೆ ಅಧೋಗತಿಗೆ ಹೋಗುತ್ತಿದೆ. ಇದೆಲ್ಲವನ್ನು ಗಮನಿಸಿ ನೀವು ಮತ ಚಲಾಯಿಸಿ ಎಂದು ಜನತೆಗೆ ಸಲಹೆ ನೀಡಿದರು.