ಬೆಂಗಳೂರು: ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ. ಆದ್ದರಿಂದ ಜೆಡಿಎಸ್‌ನವರಿಗೆ ಯಾರು ಬೇಕೋ ಅವರ ಹೆಸರನ್ನು ಘೋಷಣೆ ಮಾಡುತ್ತಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ಜೆಡಿಎಸ್ ಕ್ಷೇತ್ರವಾದ್ದರಿಂದ ಅವರು ಯಾರಿಗೆ ಬೇಕೋ ಅವರ ಹೆಸರನ್ನು ಘೋಷಣೆ ಮಾಡಿಕೊಳ್ತಾರೆ. ಈಗಾಗಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೂಡ ಚನ್ನಪಟ್ಟಣದಲ್ಲಿ ಜೆಡಿಎಸ್‌ನವರು ಹೆಸರನ್ನು ಘೋಷಣೆ ಮಾಡುತ್ತಾರೆ ಎಂದಿದ್ದಾರೆ. ಹಾಗಾಗಿ ಜೆಡಿಎಸ್‌ನವರೇ ಕ್ಷೇತ್ರದಲ್ಲಿ ಅಭ್ಯರ್ಥಿ ಯಾರೆಂದು ಘೋಷಣೆ ಮಾಡುತ್ತಾರೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಈಗಾಗಲೇ ಬಿಜೆಪಿಯಿಂದ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಹಾಗಾಗಿ ಚನ್ನಪಟ್ಟಣದಲ್ಲಿ ಜೆಡಿಎಸ್‌ನವರು ಅಭ್ಯರ್ಥಿ ಘೋಷಣೆ ಮಾಡಿಕೊಳ್ಳಲಿ. ಎರಡೂ ಪಕ್ಷಗಳು ಸೇರಿ ಮೂರು ಕ್ಷೇತ್ರಗಳನ್ನು ಗೆಲ್ಲೋದಕ್ಕೆ ಶ್ರಮ ವಹಿಸುತ್ತೇವೆ ಎಂದರು.





