ಬೆಂಗಳೂರು: ಐದು ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್‌ಬಾಸ್ 11 ಸ್ಪರ್ಧಿ ಚೈತ್ರಾ ಕುಂದಾಪುರ ಅವರು ಬಿಗ್‌ಬಾಸ್ ಶೋನಿಂದ ಹೊರಗೆ ಬಂದು ಎಸಿಎಂಎಂ ಕೋರ್ಟ್ ವಿಚಾರಣೆಗೆ ಹಾಜರಾಗಿದ್ದಾರೆ.
ವಂಚನೆ ಕೇಸ್ ಹಿನ್ನೆಲೆ ಚೈತ್ರಾ ಕುಂದಾಪುರ ಬಿಗ್‌ಬಾಸ್ ಹೊರಬಂದು ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರಾಗಿದ್ದು, ಇವರೊಂದಿಗೆ ಶ್ರೀಕಾಂತ್ ಸೇರಿದಂತೆ ಮೂವರು ಆರೋಪಿಗಳು ವಿಚಾರಣೆ ಎದುರಿಸಿದ್ದಾರೆ. ಈ ಬಗ್ಗೆ ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರು 2025ರ ಜನವರಿ.13ಕ್ಕೆ ವಿಚಾರಣೆಯನ್ನು ಮುಂದೂಡಿದ್ದಾರೆ.
ಏನಿದು ಪ್ರಕರಣ?
ಉದ್ಯಮಿ ಗೋವಿಂದಬಾಬು ಪೂಜಾರಿ ಎಂಬುವವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಕೊಡಿಸುವುದಾಗಿ ವಂಚಿಸಿ 5 ಕೋಟಿ ಚೈತ್ರಾ ಕುಂದಾಪುರ ಅವರು ರೂಪಾಯಿಗಳನ್ನು ಪಡೆದಿದ್ದರು ಎನ್ನಲಾಗಿತ್ತು. ಈ ವಂಚನೆ ಆರೋಪದ ಮೇಲೆ ಚೈತ್ರಾ ಕುಂದಾಪುರ, ಶ್ರೀಕಾಂತ್ ಸೇರಿದಂತೆ ಮೂವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು.
ಈ ಹಿನ್ನೆಲೆಯಲ್ಲಿ ಇಂದು ಎಸಿಎಂಎಂ ಕೋರ್ಟ್‌ಗೆ ಹಾಜರಾಗಿ ವಿಚಾರಣೆ ನಡೆಸಿದ್ದರು. ವಿಚಾರಣೆ ಮುಗಿದ ಬಳಿಕ ವಾಪಾಸ್ ಬಿಗ್‌ಬಾಸ್ ಮರಳಿದ್ದಾರೆ.





