ಬೆಂಗಳೂರು : ಕಳೆದ ಏಪ್ರಿಲ್ 18ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ 4 ಶಿವಂಗಿಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಜೂನ್ 4ರಿಂದ ಸಾರ್ವಜನಿಕ ವೀಕ್ಷಣೆಗೆ ಲಭ್ಯವಾಗಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಈ ಸಂಬಂಧ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಾದ ಕುಮಾರ್ ಪುಷ್ಕರ್ ಅವರೊಂದಿಗೆ ಸಭೆ ನಡೆಸಿದ ಸಚಿವರು, ಚೀತಾಗಳಿಗಾಗಿಯೇ ಬನ್ನೇರುಘಟ್ಟ ಮೃಗಾಲಯದಲ್ಲಿ ಪ್ರತ್ಯೇಕವಾಗಿ ಸಿದ್ಧಪಡಿಸಿರುವ ಆವರಣದಲ್ಲಿ ಈ ಚಿತಾಗಳನ್ನು ಬಿಡಲಾಗುವುದು ಎಂದರು.
ವನ್ಯಜೀವಿ ವಿನಿಮಯ ಕಾರ್ಯಕ್ರಮದ ಭಾಗವಾಗಿ ಏ.18ರ ಮಧ್ಯರಾತ್ರಿ ದ.ಆಫ್ರಿಕಾದಿಂದ ಬೆಂಗಳೂರಿಗೆ ಬಂದ ಈ ಹೊಸ ಅತಿಥಿಗಳನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಬರಮಾಡಿಕೊಂಡಿದ್ದರು.
ಈ ಚೀತಾಗಳು ಬನ್ನೇರುಘಟ್ಟ ಪರಿಸರ, ವಾತಾವರಣ, ಹವಾಮಾನಕ್ಕೆ ಹೊಂದಿಕೊಳ್ಳಲು ಪ್ರತ್ಯೇಕವಾಗಿ ಇಡಲಾಗಿತ್ತು. ಮತ್ತು ಇವುಗಳ ಆರೋಗ್ಯದ ಬಗ್ಗೆ ಸತತ ನಿಗಾ ಇಡಲಾಗಿತ್ತು. ಪ್ರಸ್ತುತ ಚಿತಾಗಳು ಸಂಪೂರ್ಣ ಆರೋಗ್ಯವಾಗಿದೆ ಎಂಬ ಮಾಹಿತಿ ಪಡೆದ ಸಚಿವರು, ಜೂನ್ ಮೊದಲ ವಾರದಲ್ಲಿ ಪ್ರವಾಸಿಗರಿಗೆ ಚೀತಾ ನೋಡಲು ಅವಕಾಶ ಕಲ್ಪಿಸುವಂತೆ ನಿರ್ದೇಶಿಸಿದರು.
ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್…
ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…
ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…
ಮೈಸೂರು: ಬಹುಭಾಷಾ ನಟ ಪ್ರಭುದೇವ್ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…