ತುಮಕೂರು: ಕೃಷಿ ಹೊಂಡದಲ್ಲಿ ಸೋಡಿಯಂ ಹಾಕಿ ಬ್ಲಾಸ್ಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್‌ನನ್ನು ಪೊಲೀಸರು ಬಂಧಿಸಿದ್ದಾರೆ.
ಸೋಡಿಯಂ ನೀರಿನಲ್ಲಿ ಎಸೆದು ಬ್ಲಾಸ್ಟ್ ಮಾಡಿದ್ದ ಪ್ರತಾಪ್ ಸಾರ್ವಜನಿಕರು ಹಾಗೂ ಪರಿಸರ ಪ್ರೇಮಿಗಳಿಂದ ಟೀಕೆಗೆ ಗುರಿಯಾಗಿದ್ದರು.
ಈ ಸಂಬಂಧ ಇಂದು ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ಡ್ರೋನ್ ಪ್ರತಾಪ್‌ನನ್ನು ಬಂಧಿಸಿದ್ದಾರೆ.
ಬಂಧಿತ ಡ್ರೋನ್ ಪ್ರತಾಪ್‌ನನ್ನು ಬೆಂಗಳೂರಿಗೆ ಕರೆತರಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ನೀರಿಗೆ ಕೆಮಿಕಲ್ ಹಾಕಿ ಡ್ರೋನ್ ಪ್ರತಾಪ್ ನೀರಿನಾಳದಲ್ಲಿ ಬ್ಲಾಸ್ಟ್ ಮಾಡಿದ್ದಾರೆ. ಕೆಮಿಕಲ್ ಎಸೆದಿದ್ದೇ ತಡ ದೊಡ್ಡ ಮಟ್ಟದಲ್ಲಿ ಬ್ಲಾಸ್ಟ್ ಆಗಿದೆ. ಅದರಲ್ಲಿ ಬೆಂಕಿ ಸಹ ಚಿಮ್ಮಿದೆ. ಇದನ್ನು ಪ್ರತಾಪ್ ವಿಡಿಯೋ ಸಹ ಮಾಡಿದ್ದರು. ಹೀಗಾಗಿ ಪ್ರತಾಪ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹ ಕೇಳಿಬಂದ ಹಿನ್ನೆಲೆಯಲ್ಲಿ ಡ್ರೋನ್ ಪ್ರತಾಪ್‌ನನ್ನು ಅರೆಸ್ಟ್ ಮಾಡಲಾಗಿದೆ.





