ರಾಜ್ಯ

ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಕಿಮೋಥೆರಪಿ ಕೇರ್‌ ಸೆಂಟರ್:‌ ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಮುಂಬರುವ ಒಂದು ತಿಂಗಳ ಒಳಗಾಗಿ ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಕಿಮೋಥೆರಪಿ ಕೇರ್‌ ಸೆಂಟರ್‌ಗಳನ್ನು ಆರಂಭಿಸುವುದಾಗಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು, ಕ್ಯಾನ್ಸರ್‌ ರೋಗಿಗಳು ಕಿಮೋಥೆರಪಿಗಾಗಿ ನಗರಗಳಿಗೆ ಬರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ನಾವು ಕೂಲಂಕುಷವಾಗಿ ಚರ್ಚೆ ನಡೆಸಿದ್ದು, ಜನರಿಗೆ ಅವರ ಜಿಲ್ಲೆಯಲ್ಲಿಯೇ ಕಿಮೋಥೆರಪಿ ಸೇವೆ ಒದಗಿಸುವ ನಿಟ್ಟಿನಲ್ಲಿ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಕಿಮೋಥೆರಪಿ ಡೇ ಕೇರ್‌ ಸೆಂಟರ್‌ಗಳನ್ನು ತೆರೆಯಲಾಗುವುದು. ಒಂದು ತಿಂಗಳ ಒಳಗಾಗಿ ಈ ಸೇವೆ ಲಭ್ಯವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಮೂಲಕ ಕ್ಯಾನ್ಸರ್‌ ರೋಗಿಗಳು ದೂರದ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳಿಗೆ ದಣಿದು ಹೋಗುವುದು ತಪ್ಪಲಿದ್ದು, ಅವರ ಜಿಲ್ಲೆಗಳಲ್ಲೇ ಇರುವ ಜಿಲ್ಲಾಸ್ಪತ್ರೆಗಳಲ್ಲಿ ಕಿಮೋಥೆರಪಿ ಚಿಕಿತ್ಸೆ ದೊರಕಲಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರೋಹಿತ್‌ ಬ್ಯಾಟಿಂಗ್‌ ಅಬ್ಬರ : ಭರ್ಜರಿ ಗೆಲುವು ದಾಖಲಿಸಿದ ಮುಂಬೈ

ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್‌ ಹಾಕಿದ ಮುಂಬೈ ಇಂಡಿಯನ್ಸ್‌ ಕೊನೆಗೂ ಐಪಿಎಲ್‌ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…

5 hours ago

ಷೇರುಪೇಟೆ ವಹಿವಾಟಿನಲ್ಲಿ ಇಳಿಕೆ ; ಟಾಪ್-10 ಕಂಪನಿಗಳಲ್ಲಿ 7ಕ್ಕೆ ಭಾರೀ ನಷ್ಟ

ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…

9 hours ago

ಎಲ್‌ಪಿಜಿ ಹೊತ್ತ ಮತ್ತೆರಡು ಹಡಗು ಭಾರತದತ್ತ

ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…

9 hours ago

ಮೇಲುಕೋಟೆ ಜಾತ್ರೆ | ವೈರಮುಡಿ ಕಿರೀಟಧಾರಣಾ ಮಹೋತ್ಸವದಲ್ಲಿ 2 ಲಕ್ಷ ಜನರು ಭಾಗಿ

ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…

9 hours ago

ಅಸ್ಸಾಂ ಚುನಾವಣೆ | ಪಂಚ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…

9 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ : ​ಆಹಾರ,ನಾಗರಿಕ ಸರಬರಾಜು ಇಲಾಖೆ ಸ್ಪಷ್ಟನೆ

ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ‌ ಎಲ್.ಪಿ.ಜಿಗೆ ಯಾವುದೇ…

9 hours ago