Mysore
19
few clouds
Light
Dark

ಬೆಂಗಳೂರು ಕಂಬಳಕ್ಕೆ ಮುಖ್ಯಮಂತ್ರಿಗಳಿಂದ 1 ಕೋಟಿ ರೂ ಘೋಷಣೆ: ಶಾಸಕ ಅಶೋಕ್ ರೈ

ಪುತ್ತೂರು : ಬೆಂಗಳೂರು ಅರಮನೆ ಮೈದಾನದಲ್ಲಿ ನ.24ರಿಂದ 26 ರತನಕ ನಡೆಯಲಿರುವ ಬೆಂಗಳೂರು‌ ಕಂಬಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಒಂದು ಕೋಟಿ ಘೋಷಣೆ ಮಾಡಿದ್ದಾರೆ ಎಂದು ಕಂಬಳ ಸಮಿತಿಯ ಅಧ್ಯಕ್ಷ, ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ ಕರಾವಳಿಯ ಜನಪದ ಕ್ರೀಡೆಯಾದ ಕಂಬಳವನ್ನು ಬೆಂಗಳೂರಿನಲ್ಲಿ ಆಯೋಜನೆ ಮಾಡಲಾಗಿದೆ. ಈಗಾಗಲೇ ಕಂಬಳಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಬೆಂಗಳೂರು ಕಂಬಳ ಸಮಿತಿಯ ಗೌರವಾಧ್ಯಕ್ಷರಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಕಂಬಳ ಸಮಿತಿ ನೇಮಕ ಮಾಡಿದೆ.

ಕರೆ ಮುಹೂರ್ಥದ ಬಳಿಕ ಅನೇಕ ಸಚಿವರು ಕಂಬಳ ನಡೆಯುವ ಅರಮನೆ ಮೈದಾ‌ನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಸರ್ಕಾರದಿಂದ ಸರ್ವ ರೀತಿಯ ಸಹಕಾರವನ್ನು ನೀಡುವುದಾಗಿ ಈ ಹಿಂದೆ ಘೋಷಣೆಯನ್ನು ಮಾಡಿದ್ದರು. ಬೆಂಗಳೂರು ಕಂಬಳಕ್ಕೆ ಖ್ಯಾತ ಬಾಲಿವುಡ್ ನಟಿಯರು, ಸೆಲೆಬ್ರಿಟಿಗಳು ಆಗಮಿಸಲಿದ್ದು ಸುಮಾರು 8 ಲಕ್ಷ ಮಂದಿ ಕಂಬಳದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದರು.

ಇದೀಗ ಕಂಬಳಕ್ಕೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಲಾಗಿದೆ. ಕಂಬಳ ಸಮಿತಿಯವರ ಉತ್ಸಾಹವನ್ನು ಕಂಡ ಸಿಎಂ ಅವರು ಕಂಬಳಕ್ಕೆ ಸರ್ಕಾರದಿಂದ ಒಂದು ಕೋಟಿ ರೂ ಅನುದಾನ ನೀಡುವುದಾಗಿ ಘೋಷಣೆ ಮಾಡಿದ್ದು ಕಂಬಳದ ಮೆರುಗನ್ನು ಹೆಚ್ಚಿಸಿದೆ.

ಕಂಬಳದಲ್ಲಿ ಸುಮಾರು 150 ಕ್ಕೂ‌ಹೆಚ್ಚು ಮಿಕ್ಕಿ ಜೋಡಿ ಕಂಬಳ ಕೋಣಗಳು ಭಾಗವಹಿಸಲಿದ್ದು ಮಂಗಳೂರಿನಿಂದ ರಸ್ತೆ ಮಾರ್ಗವಾಗಿ ಕೋಣಗಳನ್ನು ಕರೆದೊಯ್ಯಲಾಗುತ್ತದೆ. ಕಂಬಳ ಕೋಣಗಳಿಗೆ ಬೇಕಾದ ಆಹಾರ ಮತ್ತು ನೀರನ್ನು ಕೂಡಾ ಮಂಗಳೂರಿನಿಂದಲೇ ವ್ಯವಸ್ಥೆ ಮಾಡಲಾಗುತ್ತಿದೆ.

ಖ್ಯಾತ ಸೆಲೆಬ್ರಿಟಿಗಳಾದ ಐಶ್ವರ್ಯಾ ರೈ, ಅನುಷ್ಕಾ ಶೆಟ್ಡಿ, ರಜನಿಕಾಂತ್ ಸೇರಿದಂತೆ ರಾಷ್ಡ್ರಿಯ ಮತ್ತು ಅಂತರ ರಾಷ್ಡ್ರೀಯ ಖ್ಯಾತಿಯ ಘಟಾನುಘಟಿ ಪ್ರಮುಖರು ಭಾಗವಹಿಸಿ ಕಂಬಳಕ್ಕೆ ತಾರಾ ಮೆರುಗನ್ನು ನೀಡಲಿದ್ದಾರೆ. ಕಂಬಳ ಕರೆ‌ಮುಹೂರ್ತ ನಡೆಸಲಾಗಿದ್ದು ಕರೆ ನಿರ್ಮಾಣವೂ ಭರದಿಂದ ಸಾಗುತ್ತಿದೆ. ಕಂಬಳಕ್ಕೆ ಸರ್ಕಾರದ ಸಹಾಯ ಹಸ್ತ ದೊರೆಯುವುದರೊಂದಿಗೆ ಬೆಂಗಳೂರು‌ ಕಂಬಳ ಐತಿಹಾಸಿಕ ಘಟನೆಗೆ ಸಾಕ್ಷಿಯಾಗಲಿದೆ.

ಬೆಂಗಳೂರು ಕಂಬಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಒಂದು ಕೋಟಿ ನೀಡುವುದಾಗಿ ಘೋಷಣೆ ಮಾಡಿರುವುದು ಅತ್ಯಂತ ಸಂತೋಷದ ವಿಚಾರವಾಗಿದೆ. ಬೆಂಗಳೂರು ಕಂಬಳ ಹೊಸ ಇತಿಹಾಸವನ್ನು ನಿರ್ಮಿಸಲಿದ್ದು ಅಂತರ ರಾಷ್ಟ್ರೀಯ ಮಟ್ಟದಲ್ಲೂ ಖ್ಯಾತಿಯನ್ನು ಪಡೆಯುವುದರಲ್ಲಿ ಯಾವುದೇ ಸಂಶಯವಿಲ್ಲ. ಕಂಬಳಕ್ಕೆ ಬೇಕಾದ ಎಲ್ಲಾ ಸಿದ್ದತೆಗಳು ಭರದಿಂದ ಸಾಗುತ್ತಿದ್ದು ವಿವಿಧ ತುಳು ಸಂಘಟನೆಗಳು ಮತ್ತು ಕರಾವಳಿಯ ವಿವಿಧ ಸಂಘಟನೆಗಳ ಸಹಕಾರದಿಂದ ಎಲ್ಲಾ ಕೆಲಸಗಳು ಸುಸೂತ್ರವಾಗಿ ನಡೆಯುತ್ತಿದೆ.

-ಅಶೋಕ್ ರೈ ಶಾಸಕರು ಪುತ್ತೂರು, ಅಧ್ಯಕ್ಷರು ಬೆಂಗಳೂರು‌ ಕಂಬಳ ಸಮಿತಿ.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ