ಬೆಂಗಳೂರು- ನೂತನವಾಗಿ ಆರಂಭಿಸಿರುವ ಎಲ್ಲ ವಿಶ್ವವಿದ್ಯಾಲಯಗಳು ಮುಂದಿನ ಭವಿಷ್ಯ ಬರೆಯುವ ಕೇಂದ್ರಗಳು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಜ್ಞಾನಜ್ಯೋತಿ ಸಭಾಂಗಣದಲ್ಲಿಂದು ಒಂಭತ್ತು ನೂತನ ವಿಶ್ವವಿದ್ಯಾಲಯಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಸರ್ಕಾರ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಿದೆ. ಶಿಕ್ಷಣ ಬೆಳವಣಿಗೆಯಾಗಬೇಕು.ಈ ರೀತಿಯ ವಿಶ್ವ ವಿದ್ಯಾಲಯಗಳು ದೇಶದಲ್ಲಿಯೇ ಪ್ರಥಮವಾಗಿ ಪ್ರಾರಂಭವಾಗಿವೆ. ಮುಂದಿನ ದಿನಗಳಲ್ಲಿ ಎಲ್ಲರೂ ಕರ್ನಾಟಕದ ಮಾದರಿ ಅಳವಡಿಸಿಕೊಳ್ಳುವಂತಾಗಬೇಕು ಎಂದು ಹೇಳಿದರು.
ದೇಶದಲ್ಲಿ ಉನ್ನತ ಶಿಕ್ಷಣ ಅಂದರೆ ಐಐಟಿ ಅದಕ್ಕೆ ಸಿಇಟಿ ಮೂಲಕ ಆಯ್ಕೆಯಾಗಬೇಕು. ನಮ್ಮ ಮಕ್ಕಳೂ ಐಐಟಿ ಮಾದರಿಯಲ್ಲಿ ಶಿಕ್ಷಣ ಪಡೆಯಬೇಕು ಎಂದು ಕೆಐಟಿ ಸ್ಥಾಪನೆ ಮಾಡಲಾಗಿದೆ. ಮುಂದಿನ ಐದು ವರ್ಷಗಳಲ್ಲಿ ಎಲ್ಲಾ ಸಂಸ್ಥೆಗಳು ಐಐಟಿ ಮಾದರಿಯಲ್ಲಿ ಇರಲಿವೆ. ಐಐಟಿ ಹುಡುಕಿಕೊಂಡು ಹೋಗುವ ಬದಲು ಇಲ್ಲಿಯೇ ಐಐಟಿ ಸೃಷ್ಟಿಸುತ್ತಿದ್ದೇವೆ. ಜಗತ್ತಿನ ಉನ್ನತ ವಿವಿಗಳ ಜೊತೆಗೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳು ನಾಡಿನ ಭವಿಷ್ಯ. ಈಗ 21 ನೇ ಶತಮಾನ ಜ್ಞಾನದ ಶತಮಾನ .ಮುಂದಿನ ದಿನಗಳಲ್ಲಿ ಭಾರತ ವಿಶ್ವ ಗುರುವಾಗಲಿದೆ. ನಮ್ಮ ಪ್ರಧಾನಿ ನರೇಂದ್ರ ಮೋದಿ ವಿಶ್ವ ನಾಯಕರಾಗಿ ಹೊರಹೊಮ್ಮಿದ್ದಾರೆ. ಪಾಕಿಸ್ತಾನದ ಪ್ರಜೆಗಳು ಮೋದಿಯಂಥ ಪ್ರಧಾನಿ ಬೇಕು ಎನ್ನುತ್ತಿದ್ದಾರೆ. ಚೀನಾ ಕೂಡ ಭಾರತ ಕೊರೊನಾ ನಿಯಂತ್ರಣ ಮಾಡಿದ್ದನ್ನು ಮೆಚ್ಚಿಕೊಂಡಿದೆ. ಶಿಕ್ಷಣ ಸಂಸ್ಥೆ ಅಂದರೆ ಪಾವಿತ್ರ್ಯತೆ. ಸಂಸ್ಥೆಗಳು ಸರಸ್ವತಿಯ ವಾಹನ ಪರಮಹಂಸ ಕೂಡ ಪವಿತ್ರವಾಗಿದ್ದು ವಿದ್ಯಾರ್ಥಿಗಳು ಅಷ್ಟೇ ಎತ್ತರಕ್ಕೆ ಬೆಳೆಯಬೇಕು ಎಂದು ಹೇಳಿದರು.
ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್, ಸಚಿವ ಮುರುಗೇಶ್ ನಿರಾಣಿ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಶಿಕ್ಷಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್ ಉಪಸ್ಥಿತರಿದ್ದರು.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.