ಇಬ್ಬರ ಶಿಕ್ಷಣಕ್ಕೆ ವೈಯಕ್ತಿಕ ನೆರವು ಘೋಷಿಸಿದ ಸಿಎಂ
ಬೆಂಗಳೂರು : SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ Rank ಪಡೆದ ಬಾಗಲಕೋಟ ಜಿಲ್ಲೆಯ ಮುಧೋಳ ತಾಲೂಕಿನ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ಕುಮಾರಿ ಅಂಕಿತ ಹಾಗೂ ದ್ವಿತೀಯ Rank ಪಡೆದ ಮಂಡ್ಯ ತಾಲೂಕಿನ
ತುಂಬಿಗೆರೆ ಮೊರಾರ್ಜಿ ಶಾಲೆಯ ವಿದ್ಯಾರ್ಥಿ ನವನೀತ್ ಕೆ.ಸಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸನ್ಮಾನಿಸಿದರು. ಮುಂದಿನ ವಿದ್ಯಾಭ್ಯಾಸ ಯಶಸ್ವಿಯಾಗಿ ಸಾಗಲಿ ಎಂದು ಮುಖ್ಯಮಂತ್ರಿಗಳು ಶುಭ ಹಾರೈಸಿದರು.
ಅಂಕಿತ ಮತ್ತು ನವನೀತ್ ಸಾಧನೆಗೆ ಮೆಚ್ವುಗೆ ವ್ಯಕ್ತಪಡಿಸಿದ ಸಿಎಂ, ಪೋಷಕರನ್ನೂ ಅಭಿನಂದಿಸಿದರು.
ಮುಂದಿನ ವಿಧ್ಯಾಭ್ಯಾಸಕ್ಕೆ ಅನುಕೂಲವಾಗಲಿ ಎಂದು ಅಂಕಿತಾಗೆ 5 ಲಕ್ಷ ರೂ. ಹಾಗೂ ನವನೀತ್ ಗೆ 3 ಲಕ್ಷ ರೂ.ಗಳ ನೆರವನ್ನು ಸಿಎಂ ಘೋಷಿಸಿದರು.
ಅಂಕಿತಾ ಓದಿದ ಶಾಲೆಯ ಅಭಿವೃದ್ಧಿಗೆ ಒಂದು ಕೋಟಿ ರೂ. ಹಾಗೂ ನವನೀತ್ ವ್ಯಾಸಂಗ ಮಾಡಿದ ಶಾಲೆಯ ಅಭಿವೃದ್ಧಿಗೆ 50 ಲಕ್ಷ ರೂ.ಗಳ ಅನುದಾನ ಬಿಡುಗಡೆ ಮಾಡುವುದಾಗಿ ಸಿಎಂ ತಿಳಿಸಿದರು.
ವಿದ್ಯಾರ್ಥಿಗಳು ಮುಖ್ಯಮಂತ್ರಿಗಳಿಂದ ಸನ್ಮಾನ ಸ್ವೀಕರಿಸುವ ಸಂದರ್ಭದಲ್ಲಿ ಉಪಸ್ಥಿತರಿದ್ದ ಪೋಷಕರು ಸರ್ಕಾರದ ನೆರವಿಗೆ ಧನ್ಯತೆ ಅರ್ಪಿಸಿದರು.
ಮೊರಾರ್ಜಿ ದೇಸಾಯಿ ವಸತಿ ಶಾಲೆ ನನ್ನ ಕಲ್ಪನೆ. 1994 ರಲ್ಲಿ ಉಪ ಮುಖ್ಯಮಂತ್ರಿ ಆಗಿದ್ದಾಗ ಈ ಶಾಲೆಗಲಿಗೆ ಚಾಲನೆ ನೀಡಲಾಯಿತು ಎಂದು ಸಿದ್ದರಾಮಯ್ಯ ಅವರು ಹೇಳಿದರು.
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…
ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…
ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…
ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…