ಬೆಂಗಳೂರು : ಚಿಕ್ಕಬಳ್ಳಾಪುರದ ಚಿತ್ರಾವತಿ ಸಮೀಪ ಗುರುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ 13 ಮಂದಿ ಮೃತಪಟ್ಟಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೃತರ ಕುಟುಂಬಕ್ಕೆ ತಲಾ ಎರಡು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿಎಂ, ಚಿಕ್ಕಬಳ್ಳಾಪುರದ ಚಿತ್ರಾವತಿ ಸಮೀಪ ಇಂದು ಸಂಭವಿಸಿದ ಭೀಕರ ಅಪಘಾತದಲ್ಲಿ 13 ಮಂದಿ ಮೃತಪಟ್ಟ ಸುದ್ದಿ ತಿಳಿದು ಅತೀವ ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ.
ಮೃತ ದುರ್ದೈವಿಗಳ ಕುಟುಂಬಗಳಿಗೆ ತಲಾ ರೂ. 2 ಲಕ್ಷ ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇಂದು ಬೆಳಗಿನ ಜಾವ ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆಯ ಮುಂದೆಯೇ ರಸ್ತೆ ಬದಿ ನಿಂತಿದ್ದ ಸಿಮೆಂಟ್ ಲಾರಿಗೆ ಟಾಟಾ ಸುಮೋ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಸುಮೋದಲ್ಲಿ 12 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಗಂಭೀರವಾಗಿ ಗಾಯಗೊಂಡಿದ್ದ ಒಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಟಾ ಸುಮೋ ಬಾಗೇಪಲ್ಲಿಯಿಂದ ಚಿಕ್ಕಬಳ್ಳಾಪುರದ ಕಡೆ ಹೋಗುತ್ತಿತ್ತು. ಆದರೆ ದಟ್ಟ ಮಂಜು ಕವಿದ ಹಿನ್ನೆಲೆಯಲ್ಲಿ ಟಾಟಾ ಸುಮೊ ಚಾಲಕನಿಗೆ ಸರಿಯಾಗಿ ರಸ್ತೆ ಕಾಣಿಸಿಲ್ಲ. ಇದರಿಂದ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…