ಚಿಕ್ಕಬಳ್ಳಾಫುರ : ಚಿಕ್ಕಬಳ್ಳಾಪುರದ ಹೊರವೊಲಯದಲ್ಲಿ ಗುರುವಾರ ಬೆಳಗ್ಗೆ ನಿಂತಿದ್ದ ಲಾರಿಗೆ ಟಾಟಾ ಸುಮೋ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ 12 ಮಂದಿ ಮೃತಪಟ್ಟಿದ್ದಾರೆ.
ಇಂದು ಬೆಳಗಿನ ಜಾವ ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆಯ ಮುಂದೆಯೇ ರಸ್ತೆ ಬದಿ ನಿಂತಿದ್ದ ಬಲ್ಕರ್ ಲಾರಿಗೆ ಟಾಟಾ ಸುಮೋ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಸುಮೋದಲ್ಲಿ 12 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.
ಟಾಟಾ ಸುಮೋ ಬಾಗೇಪಲ್ಲಿಯಿಂದ ಚಿಕ್ಕಬಳ್ಳಾಪುರದ ಕಡೆ ಹೋಗುತ್ತಿತ್ತು. ಆದರೆ ದಟ್ಟ ಮಂಜು ಕವಿದ ಹಿನ್ನೆಲೆಯಲ್ಲಿ ಟಾಟಾ ಸುಮೊ ಚಾಲಕನಿಗೆ ಸರಿಯಾಗಿ ರಸ್ತೆ ಕಾಣಿಸಿಲ್ಲ. ಇದರಿಂದ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.
ಮಗು, ಮೂವರು ಮಹಿಳೆಯರು ಸೇರಿ 12 ಜನ ಮೃತಪಟ್ಟಿದ್ದಾರೆ. ಓರ್ವ ಮಹಿಳೆಯ ಸ್ಥಿತಿ ಚಿಂತಾಜನಕವಾಗಿದೆ. ಮೃತರು ಆಂಧ್ರದ ಗೊರಂಟ್ಲ ನಿವಾಸಿಗಳು ಎನ್ನುವುದು ಗೊತ್ತಾಗಿದೆ. ಒಬ್ಬೊಬ್ಬರು ಒಂದೊಂದು ಊರಿನವರು ಎಂಬ ಮಾಹಿತಿ ಸಿಕ್ಕಿದೆ ಎಂದು ಚಿಕ್ಕಬಳ್ಳಾಪುರ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…