ಚಿಕ್ಕಮಗಳೂರು: ಆನೆ ದಾಳಿಗೆ ರೈತನೊಬ್ಬ ಬಲಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಗುರುಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರೈತ ವೆಂಕಟೇಶ್ (58) ಮೃತ ದುರ್ದೈವಿ.
ಭಾನುವಾರ ತಡ ರಾತ್ರಿ ಮನೆ ಮುಂದಿರುವ ತೋಟದಲ್ಲಿದ್ದ ಹಸುವನ್ನು ಕಟ್ಟಲು ಹೋದಾಗ ಆನೆ ಉಸಿರಾಟದ ಶಬ್ದ ಕೇಳಿ ವೆಂಕಟೇಶ್ ಟಾರ್ಚ್ ಆನ್ ಮಾಡಿದ್ದಾರೆ. ಈ ವೇಳೆ ವೆಂಕಟೇಶ್ ಅವರನ್ನು ಆನೆ ಸೊಂಡಿಲಿನಿಂದ ಎತ್ತಿ ತೆಂಗಿನ ಮರಕ್ಕೆ ಹೊಡೆದಿದೆ, ಪರಿಣಾಮ ವೆಂಕಟೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿಗಳು ಮೃತ ರೈತನ ಕುಟುಂಬಕ್ಕೆ 15 ಲಕ್ಷ ಪರಿಹಾರ ಘೋಷಿಸಿದರು.
ಇದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು ಪರಿಹಾರ ಕೊಟ್ಟರೆ ಜೀವ ಮರಳಿ ಬರುತ್ತಾ? ಕಾಡಾನೆಗಳಿಂದ ಶಾಶ್ವತ ಪರಿಹಾರ ನೀಡಿ ಅಂತ ಸಿಟ್ಟಿಗೆದ್ರು. ಜಿಲ್ಲೆಯ ಕಡೂರು ಅಜ್ಜಂಪುರ ತಾಲೂಕು ಹೊರತುಪಡಿಸಿದರೆ ಇನ್ನುಳಿದ ತಾಲೂಕುಗಳಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು ಜನ ಕಾಡಾನೆಗಳಿಂದ ಶಾಶ್ವತ ಪರಿಹಾರ ನೀಡಿ ಅಂತ ಆಗ್ರಹಿಸುತ್ತಿದ್ದಾರೆ.
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್ಆರ್‌ಟಿಸಿ ವಿಫಲ…
ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…