ಚಿಕ್ಕಮಗಳೂರು: ಇಲ್ಲಿನ ಭಾರೀ ಪ್ರಮಾಣದ ಕಾಡ್ಗಿಚ್ಚು ಸಂಭವಿಸಿದ್ದು, ಹತ್ತಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿರುವ ಘಟನೆ ಕಳಸ ತಾಲ್ಲೂಕಿನ ಹೊರನಾಡು ಸಮೀಪದಲ್ಲಿ ನಡೆದಿದೆ.
ಮಂಗಳವಾರ ಸಂಜೆಯಿಂದಲೂ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಸಂಭವಿಸಿದ್ದು, ನೋಡನೋಡುತ್ತಿದ್ದಂತೆ ಅರಣ್ಯ ಬೆಂಕಿಯ ಕೆನ್ನಾಲಿಗೆಗೆ ಧಗೆ ಧಗನೆ ಉರಿಯುತ್ತಿದೆ.
ಭಾರೀ ಗಾಳಿ ಬೀಸುತ್ತಿರುವ ಪರಿಣಾಮ ಬೆಂಕಿ ಮತ್ತಷ್ಟು ವ್ಯಾಪಿಸಿದ್ದು, ಮತ್ತಷ್ಟು ಅರಣ್ಯ ಹಾಗೂ ಔಷಧೀಯ ಗುಣವುಳ್ಳ ಮರಗಳು ಬೆಂಕಿಗಾಹುತಿಯಾಗುವ ಅಪಾಯ ಎದುರಾಗಿದೆ.
ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ನಿರತರಾಗಿದ್ದು, ಸಂಜೆಯ ವೇಳೆ ಬೆಂಕಿ ನಂದಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.





