ಚಿಕ್ಕಮಗಳೂರು: ಇಲ್ಲಿನ ಭಾರೀ ಪ್ರಮಾಣದ ಕಾಡ್ಗಿಚ್ಚು ಸಂಭವಿಸಿದ್ದು, ಹತ್ತಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿರುವ ಘಟನೆ ಕಳಸ ತಾಲ್ಲೂಕಿನ ಹೊರನಾಡು ಸಮೀಪದಲ್ಲಿ ನಡೆದಿದೆ.
ಮಂಗಳವಾರ ಸಂಜೆಯಿಂದಲೂ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಸಂಭವಿಸಿದ್ದು, ನೋಡನೋಡುತ್ತಿದ್ದಂತೆ ಅರಣ್ಯ ಬೆಂಕಿಯ ಕೆನ್ನಾಲಿಗೆಗೆ ಧಗೆ ಧಗನೆ ಉರಿಯುತ್ತಿದೆ.
ಭಾರೀ ಗಾಳಿ ಬೀಸುತ್ತಿರುವ ಪರಿಣಾಮ ಬೆಂಕಿ ಮತ್ತಷ್ಟು ವ್ಯಾಪಿಸಿದ್ದು, ಮತ್ತಷ್ಟು ಅರಣ್ಯ ಹಾಗೂ ಔಷಧೀಯ ಗುಣವುಳ್ಳ ಮರಗಳು ಬೆಂಕಿಗಾಹುತಿಯಾಗುವ ಅಪಾಯ ಎದುರಾಗಿದೆ.
ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ನಿರತರಾಗಿದ್ದು, ಸಂಜೆಯ ವೇಳೆ ಬೆಂಕಿ ನಂದಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮಡಿಕೇರಿ: ಭಾರತದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಅವರು ಮಡಿಕೇರಿಯ ಪ್ರಸಿದ್ಧ ಓಂಕಾರೇಶ್ವರ ದೇವಾಲಯಕ್ಕೆ ಕುಟುಂಬ ಸಮೇತ ಭೇಟಿ ನೀಡಿ…
ಕೊಡಗು: ಕೊಡಗಿನಲ್ಲಿ ಕಾಡಾನೆ ದಾಳಿಯಿಂದ ಜನರು ಪ್ರಾಣ ಕಳೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಅರಣ್ಯ ಇಲಾಖೆ ಮತ್ತು ಶಾಸಕರ…
ಮೈಸೂರು: ಶಾಲಾ ಪಠ್ಯಪುಸ್ತಕಗಳಲ್ಲಿ ಸಂವಿಧಾನದ ಆಶಯಗಳನ್ನು ಅಳವಡಿಸುವ ಕುರಿತು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.…
ಮೈಸೂರು: ಸಂವಿಧಾನ ದಿನಾಚರಣೆಯಂದು ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ್ ಅವರು ಡಾ. ಶ್ರೀನಿಧಿ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಜಾನಪದ…
ಮಂಡ್ಯ: ಹಳೆ ಮೈಸೂರು ಭಾಗದ ಜೀವನಾಡಿ ಕೆಆರ್‌ಎಸ್ ಜಲಾಶಯದಲ್ಲಿ ನೀರಿನ ಮಟ್ಟ ಕುಸಿಯುತ್ತಿದ್ದು, ಆತಂಕ ಹೆಚ್ಚಾಗಿದೆ. ಗರಿಷ್ಠ 124.80 ಅಡಿ…
ಕೊಡಗು: ಹುತ್ತರಿ ಹಬ್ಬದ ಬಳಿಕ ತೋಟಕ್ಕೆ ಕದಿರು ಕಟ್ಟಲು ತೆರಳಿದ್ದ ವ್ಯಕ್ತಿಯೊಬ್ಬರು ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಕೊಡಗು ಜಿಲ್ಲೆಯ ತಿತಿಮತಿ…