ಚಿಕ್ಕಮಗಳೂರು : ಬಾಬಾಬುಡನ್‌ಗಿರಿ ಪ್ರದೇಶದಕ್ಕೆ ಪ್ರವಾಸ ಬಂದಿದ್ದ ಕೇರಳದ 16 ವರ್ಷದ ವಿದ್ಯಾರ್ಥಿನಿ ಶ್ರೀನಂದಾ ನಾಪತ್ತೆಯಾಗಿದ್ದು, ಕುಂಟುಬದವರು ಮತ್ತು ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
ಕೇರಳದ ಪಾಲಕ್ಕಾಡ್ ಜಿಲ್ಲೆಯವಳಾದ ಈ 10 ನೇ ತರಗತಿ ವಿದ್ಯಾರ್ಥಿನಿ ತನ್ನ ಕುಟುಂಬದೊಂದಿಗೆ ಚಿಕ್ಕಮಗಳೂರು ಪ್ರವಾಸಕ್ಕೆ ಬಂದಿದ್ದಳು. ಬಾಬಾಬುಡನ್‌ಗಿರಿ ಬೆಟ್ಟಗಳಲ್ಲಿರುವ ಮಣಿಕ್ಯಧಾರ ಜಲಪಾತದ ಸಮೀಪ ಅವಳು ನಾಪತ್ತೆಯಾಗಿರುವುದು ತಿಳಿದುಬಂದಿದೆ.
ನಿನ್ನೆ ಸಂಜೆ 5.30ರ ಸುಮಾರಿಗೆ ಜಲಪಾತ ಪ್ರದೇಶದಲ್ಲಿ ಸುತ್ತಾಡುತ್ತಿದ್ದಾಗ ವಿದ್ಯಾರ್ಥಿನಿ ಕಾಣೆಯಾಗಿರುವುದು ಕುಟುಂಬದ ಸದಸ್ಯರ ಗಮನಕ್ಕೆ ಬಂದಿದೆ. ರಾತ್ರಿ ಎಂಟು ಗಂಟೆ ತನಕ ಹುಡುಕಿ ನಂತರ ಕುಟುಂಬದವರು ಚಿಕ್ಕಮಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮತ್ತು ಸ್ಥಳೀಯರು ಸೇರಿ ವಿದ್ಯಾರ್ಥಿನಿಯನ್ನು ರಾತ್ರಿ ಹುಡುಕಾಟ ನಡೆಸಿದ್ದಾರೆ.
ಥರ್ಮಲ್ ಡ್ರೋಣ್ ಬಳಸಿ ಬೆಳಗಿನ ಜಾವ 4.30ರ ತನಕ ಹುಡುಕಾಟ ನಡೆಸಲಾಗಿದೆ. ಇಂದು ಬೆಳಿಗ್ಗೆಯಿಂದಲೂ ಸಹ ಹುಡುಕಾಟದ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರಕುಮಾರ್ ದಯಾಮ ತಿಳಿಸಿದ್ದಾರೆ.
ಮೈಸೂರು: RSS ವಿಷ ಸರ್ಪ ಎಂಬ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರತಾಪ್ ಸಿಂಹ ಆಕ್ರೋಶ…
ಮೈಸೂರು: ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಆಟೋ ಚಾಲಕರನ್ನು ಮುಂದೆ ಬಿಟ್ಟು ಸರ್ಕಾರಕ್ಕೆ ಕೆಟ್ಟ ಹೆಸರು ತರುವ…
ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಏಪ್ರಿಲ್.15ರಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಶ್ರೀಮಠದಲ್ಲಿ…
ಮೈಸೂರು : ಬಾಲ ಕಾರ್ಮಿಕ ಪದ್ಧತಿಯು ದೇಶಕ್ಕೆ ಮಾರಕವಾಗಿದ್ದು, ಮೈಸೂರು ಜಿಲ್ಲೆಯನ್ನು ಬಾಲ ಕಾರ್ಮಿಕ ಮುಕ್ತವಾಗಿಸಲು ಅಧಿಕಾರಿಗಳು ಹೆಚ್ಚಿನ ಜಾಗೃತಿ…
ಬೆಂಗಳೂರು : ರಾಜ್ಯದಲ್ಲಿರುವ ಆಟೋ ಮಾಲೀಕರು ಮತ್ತು ಚಾಲಕರು ಆತಂಕಕ್ಕೆ ಒಳಗಾಗಬಾರದು ಹಾಗೂ ಆಟೋ ಗ್ಯಾಸ್ ಕೊರತೆಯ ಬಗ್ಗೆ ಯಾವುದೇ…
ವಾಷಿಂಗ್ಟನ್ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ನೊಂದಿಗೆ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮ ಘೋಷಿಸಿದ ಬೆನ್ನಲ್ಲೇ…