ರಾಜ್ಯ

ಚಿಕ್ಕಮಗಳೂರು: ಮುತ್ತೋಡಿ ಅರಣ್ಯದಲ್ಲಿ ಭಾರೀ ಕಾಡ್ಗಿಚ್ಚು

ಚಿಕ್ಕಮಗಳೂರು: ತಾಲ್ಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಪರಿಣಾಮ ಅಪರೂಪದ ಅರಣ್ಯ ಸಂಪತ್ತು ನಾಶವಾಗಿದೆ.

ಭದ್ರಾ ಅಭಯಾರಣ್ಯ ವ್ಯಾಪ್ತಿಗೆ ಕಾಡ್ಗಿಚ್ಚು ಹಬ್ಬಿರುವುದು ಸ್ಥಳೀಯರು ಹಾಗೂ ಪರಿಸರ ಪ್ರೇಮಿಗಳಲ್ಲಿ ಆತಂಕ ಮೂಡಿಸಿದೆ. ಮುತ್ತೋಡಿ ಅರಣ್ಯ ವ್ಯಾಪ್ತಿಯ ಎಮ್ರಹಳ್ಳಿ ಮತ್ತು ಹೊಸಕಾನ್‌ ಸುತ್ತಮುತ್ತಲಿನ ಅರಣ್ಯ ಪ್ರದೇಶಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಬಿಸಿಲ ಬೇಗೆಗೆ ಒಣಗಿದ ತರಗೆಲೆಗಳು ಮತ್ತು ಹುಲ್ಲಿನಿಂದಾಗಿ ಕ್ಷಣಾರ್ಧದಲ್ಲೇ ಕಿಲೋ ಮೀಟರ್‌ಗಳಷ್ಟು ದೂರ ಬೆಂಕಿ ವ್ಯಾಪಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಅಭಯಾರಣ್ಯದಲ್ಲಿನ ಜೀವಸಂಕುಲಕ್ಕೂ ಸಂಚಕಾರ ಎದುರಾಗಿದೆ.

ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ. ಅರಣ್ಯ ಇಲಾಖೆಯಲ್ಲಿ ವಾಚರ್‌ಗಳ ಕೊರತೆ ಇರುವುದರಿಂದ ಬೆಂಕಿಯನ್ನು ನಿಯಂತ್ರಿಸಲು ತೊದರೆಯಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಲ್‌ಪಿಜಿ ಕೊರತೆ; ಜನರ ಆತಂಕ ದೂರ ಮಾಡಬೇಕಿದೆ

ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧಕ್ಕಿಂತಲ್ಲೂ ಹೆಚ್ಚು ಸದ್ದು ಮಾಡುತ್ತಿರುವುದು ಭಾರತದಲ್ಲಿನ ಎಲ್‌ಪಿಜಿ ಪೂರೈಕೆ ವಿಚಾರ. ಯುದ್ಧೋನ್ಮಾದ ವೈರತ್ವ ಹೊಂದಿರುವ…

2 hours ago

ಭಾರತ-ಗಲ್ಛ್ ರಾಷ್ಟ್ರಗಳ ಸಂಬಂಧಕ್ಕೆ ಧಕ್ಕೆ ಇಲ್ಲ!

ಶುಭಾ ಖಟಾವಕರ ಮ್ಹೆತ್ರಸ್ ಬಲಾಢ್ಯ ರಾಷ್ಟ್ರಗಳಾದ ಅಮೆರಿಕ -ಇಸ್ರೇಲ್, ಇರಾನ್ ಮೇಲೆ ದಾಳಿ ಶುರು ಮಾಡಿ ೧೩-೧೪ ದಿನಗಳೇ ಕಳೆದು…

2 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಕಾಂಗ್ರೆಸ್‌ನಲ್ಲಿ ನಿರ್ಣಾಯಕ ಘಟ್ಟಕ್ಕೆ ತಲುಪಿದ ಅಧಿಕಾರ ಹಂಚಿಕೆ

ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಅಧಿಕಾರ ಹಂಚಿಕೆಯ ಕಚ್ಚಾಟ ನಿರ್ಣಾಯಕ ಘಟ್ಟಕ್ಕೆ ತಲುಪಿದಂತೆ ಕಾಣುತ್ತಿದೆ. ಕಾರಣ ಅಧಿಕಾರ ಹಂಚಿಕೆಯ ಮಾತು ಉಳಿದುಕೊಂಡಿದೆ…

2 hours ago

‘ಕೈಗೂಡಿದ ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆಯ ಕನಸು’

ನವೀನ್ ಡಿಸೋಜ ದೀರ್ಘಕಾಲದ ಬೇಡಿಕೆಗೆ ಸರ್ಕಾರದ ಸ್ಪಂದನೆ; ಕೊಡವರ ಶ್ರೇಯೋಭಿವೃದ್ಧಿಗೆ ಅನುಕೂಲ ಮಡಿಕೇರಿ:ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ…

2 hours ago

ನಗರಸಭೆಗೆ ಗೆಜ್ಜಲಗೆರೆ-ಗೊರವನಹಳ್ಳಿ ಸೇರ್ಪಡೆಗೆ ವಿರೋಧ

ಹೇಮಂತ್‌ ಕುಮಾರ್‌  ಮಂಡ್ಯ: ಪುರಸಭೆಯಾಗಿದ್ದ ಮದ್ದೂರು ಟೌನ್ ಆಡಳಿತ ನಗರಸಭೆಯಾಗಿ ಪರಿವರ್ತನೆ ಗೊಂಡಿದೆ. ಈ ನಗರಸಭೆಗೆ ಅಕ್ಕಪಕ್ಕದ ಗೆಜ್ಜಲಗೆರೆ ಗ್ರಾಮ…

2 hours ago

ಮಧ್ಯಾಹ್ನದ ಬಿಸಿಯೂಟಕ್ಕೂ ತಟ್ಟಲಿದೆ ಗ್ಯಾಸ್ ಬಿಸಿ?

ಗಿರೀಶ್ ಹುಣಸೂರು ಸಿಲಿಂಡರ್ ರೀಫಿಲ್ಲಿಂಗ್‌ಗೆ ೨೫ ದಿನಗಳ ಅವಧಿ ನಿಗದಿ; ವಸತಿ ಶಾಲೆಗಳು, ಹಾಸ್ಟೆಲ್‌ಗಳಿಗೆ ಬಿಸಿ ತಟ್ಟುವ ಸಂಭವ ಮೈಸೂರು: ಮಧ್ಯಪ್ರಾಚ್ಯದಲ್ಲಿ…

2 hours ago