ಚಿಕ್ಕಮಗಳೂರು: ತಾಲ್ಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಪರಿಣಾಮ ಅಪರೂಪದ ಅರಣ್ಯ ಸಂಪತ್ತು ನಾಶವಾಗಿದೆ.
ಭದ್ರಾ ಅಭಯಾರಣ್ಯ ವ್ಯಾಪ್ತಿಗೆ ಕಾಡ್ಗಿಚ್ಚು ಹಬ್ಬಿರುವುದು ಸ್ಥಳೀಯರು ಹಾಗೂ ಪರಿಸರ ಪ್ರೇಮಿಗಳಲ್ಲಿ ಆತಂಕ ಮೂಡಿಸಿದೆ. ಮುತ್ತೋಡಿ ಅರಣ್ಯ ವ್ಯಾಪ್ತಿಯ ಎಮ್ರಹಳ್ಳಿ ಮತ್ತು ಹೊಸಕಾನ್ ಸುತ್ತಮುತ್ತಲಿನ ಅರಣ್ಯ ಪ್ರದೇಶಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಬಿಸಿಲ ಬೇಗೆಗೆ ಒಣಗಿದ ತರಗೆಲೆಗಳು ಮತ್ತು ಹುಲ್ಲಿನಿಂದಾಗಿ ಕ್ಷಣಾರ್ಧದಲ್ಲೇ ಕಿಲೋ ಮೀಟರ್‌ಗಳಷ್ಟು ದೂರ ಬೆಂಕಿ ವ್ಯಾಪಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಅಭಯಾರಣ್ಯದಲ್ಲಿನ ಜೀವಸಂಕುಲಕ್ಕೂ ಸಂಚಕಾರ ಎದುರಾಗಿದೆ.
ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ. ಅರಣ್ಯ ಇಲಾಖೆಯಲ್ಲಿ ವಾಚರ್‌ಗಳ ಕೊರತೆ ಇರುವುದರಿಂದ ಬೆಂಕಿಯನ್ನು ನಿಯಂತ್ರಿಸಲು ತೊದರೆಯಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…