ಚಿಕ್ಕಮಗಳೂರು: ದಕ್ಷಿಣ ಭಾರತದ ಮೊಸ್ಟ್ ವಾಂಟೆಂಡ್‌ನ ಆರು ನಕ್ಸಲರು ಮುಖ್ಯವಾಹಿನಿಗೆ ಬಂದ ಬೆನ್ನಲ್ಲೇ ಪೊಲೀಸರು ಅರಣ್ಯದಲ್ಲಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.
ನಕ್ಸಲರು ಬುಧವಾರ(ಜ.8) ರಂದು ಮುಖ್ಯವಾಹಿನಿಗೆ ಬಂದು ಶರಣಾಗಿದ್ದರು. ಬಳಿಕ ಶರಣಾಗತಿಯ ವೇಳೆ ಯಾವುದೇ ಶಸ್ತ್ರಾಸ್ತ್ರಗಳನ್ನು ಸರ್ಕಾರಕ್ಜಕೆ ಹಸ್ತಾಂತರ ಮಾಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಪೊಲೀಸರು ಶಸ್ತ್ರಾಸ್ತ್ರಗಳನ್ನು ಪತ್ತೆ ಹಚ್ಚುವ ಕಾರ್ಯಾಚರಣೆಯಲ್ಲಿದ್ದು ಅವರಿಗೆ, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಜಯಪುರ ವ್ಯಾಪ್ತಿಗೊಳಪಡುವ ಕಿತ್ತಲೆಗುಳಿ ಬಳಿಯ ಅರಣ್ಯದಲ್ಲಿ ಆರು ಬಂದೂಕು ಮತ್ತು ಮದ್ದು ಗುಂಡುಗಳು ಸಿಕ್ಕಿವೆ. ಅವುಗಳನ್ನು ಈಗಾಗಲೇ ವಶಪಡಿಸಿಕೊಳ್ಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಪೊಲೀಸರು ಅರಣ್ಯದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಒಂದು ಎ.ಕೆ-56, ಮೂರು 303 ರೈಫಲ್, ಹನ್ನೆರಡು ಬೋರ್ ಎಸ್‌ಬಿಬಿಎಲ್ ಹಾಗೂ ಒಂದು ಸ್ವದೇಶ ನಿರ್ಮಿತ ಬಂದೂಕು ದೊರೆತಿದೆ. ಅಲ್ಲದೇ 7.62 ಎಂಎಂ ಎ.ಕೆ. ಮದ್ದು ಗುಂಡು-11, 303-ರೈಫಲ್ ಮದ್ದು ಗುಂಡು-133, ಎ.ಕೆ.-56 ಖಾಲಿ ಮ್ಯಾಗಿನ್-01, 12 ಬೋರ್ ಕಾರ್ಟೀಡ್ಜಸ್-24, ಸ್ವದೇಶ ನಿರ್ಮಿತ ಪಿಸ್ತೂಲ್ ಮದ್ದು ಗುಂಡು-8 ಸೇರಿದಂತೆ ಒಟ್ಟು 176 ಮದ್ದು ಗುಂಡುಗಳನ್ನು ದೊರೆತಿವೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಜಯಪುರ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲೆಯ ಎಸ್‌ಪಿ ವಿಕ್ರಮ್ ಅಮಟೆ ತಿಳಿಸಿದ್ದಾರೆ.
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್ ವೇವ್ ಎಚ್ಚರಿಕೆ…
ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…
ನವದೆಹಲಿ: ಇದೇ ಏಪ್ರಿಲ್.15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…
ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…
ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…
ಮಂಡ್ಯ: ಮುಂಬರುವ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ರೈತರಿಗೆ ಅನುಕೂಲವಾಗುವಂತೆ ಯಾವುದೇ ಅಡಚಣೆಯಿಲ್ಲದೇ ವಿವಿಧ ಬೆಳೆಗಳಿಗೆ ಅವಶ್ಯಕವಾದ ರಸಗೊಬ್ಬರಗಳನ್ನು ನಿಯಮಾನುಸಾರ…