ಚಿಕ್ಕಮಗಳೂರು : ಹುಲಿ ಉಗುರು ಬೇಟೆಯನ್ನು ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಇತರ ಭಾಗಗಳಲ್ಲಿ ಅರಣ್ಯಾಧಿಕಾರಿಗಳು ಮುಂದುವರಿಸಿದ್ದಾರೆ. ನಿನ್ನೆ ಧಾರ್ಮಿಕ ಗುರು ವಿನಯ್ ಗುರೂಜಿಯವರನ್ನು ಚಿಕ್ಕಮಗಳೂರಿನಲ್ಲಿ ವಿಚಾರಣೆ ನಡೆಸಿದ ಅಧಿಕಾರಿಗಳು ಇಂದು ಶುಕ್ರವಾರ ಬೆಳಗ್ಗೆ ಹುಲಿ ಉಗುರಿನ ಡಾಲರ್ ಹಾಕಿಕೊಂಡಿದ್ದ ಇಬ್ಬರು ಅರ್ಚಕರನ್ನು ಬಂಧಿಸಲಾಗಿದೆ.
ಚಿಕ್ಕಮಗಳೂರಿನ ಖಾಂಡ್ಯ ಮಾರ್ಕಾಂಡೇಶ್ವರ ದೇವಾಲಯದ ಇಬ್ಬರು ಅರ್ಚಕರನ್ನು ಬಾಳೆಹೊನ್ನೂರು ಅರಣ್ಯ ವಲಯದ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಅರ್ಚಕರನ್ನು ಕೃಷ್ಣಾನಂದ ಹೊಳ್ಳ, ನಾಗೇಂದ್ರ ಜೋಯಿಸ ಎಂದು ಗುರುತಿಸಲಾಗಿದೆ. ಬಂಧಿತರಿಂದ ಒಟ್ಟು ಮೂರು ಹುಲಿ ಉಗುರನ್ನು ವಶಕ್ಕೆ ಪಡೆಯಲಾಗಿದೆ.
ಅರಣ್ಯ ಇಲಾಖೆಯ ಸಿಬ್ಬಂದಿ ಇಬ್ಬರು ಅರ್ಚಕರನ್ನು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರು ಅರ್ಚಕರ ವಿರುದ್ಧ ಬಾಳೆಹೊನ್ನೂರು ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.
ಶನಿವಾರಸಂತೆ: ಕಾಣೆಯಾಗಿದ್ದ ವ್ಯಕ್ತಿಯೊಬ್ಬರ ಮೃತದೇಹ ಮಂಗಳವಾರ ಸಂಜೆ ಕಾಫಿ ತೋಟದಲ್ಲಿ ಪತ್ತೆಯಾಗಿದ್ದು, ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಕೊಡಗು ಜಿಲ್ಲಾ…
ಎಸ್.ಎಸ್.ಭಟ್ ನಂ.ಗೂಡು: ಹೊಸ ಸೇತುವೆಯಲ್ಲಿ ದ್ವಿಮುಖ ಸಂಚಾರಕ್ಕೆ ಪೂರ್ವಸಿದ್ಧತೆ ಕೈಗೊಳ್ಳದಿದ್ದರೆ ಅಪಾಯದ ಭೀತಿ ನಂಜನಗೂಡು: ಕಬಿನಿ ನದಿಯ ದೇವರಾಜ ಅರಸು…
ಪಕ್ಷದ ನಿಷ್ಠಾವಂತ ಕಾರ್ಯಕರ್ತರಲ್ಲಿ ಅಸಮಾಧಾನ; ಶೀಘ್ರದಲ್ಲಿ ನೇಮಕ ಮಾಡಲು ಆಗ್ರಹ ಮಂಜು ಕೋಟೆ ಎಚ್.ಡಿ.ಕೋಟೆ: ಬಿಜೆಪಿ ತಾಲ್ಲೂಕು ಅಧ್ಯಕ್ಷ ಸ್ಥಾನ…
ದೇವರಾಜ ಅರಸು ಕಾಲೋನಿ, ಪೌರಕಾರ್ಮಿಕರ ಕಾಲೋನಿಯಲ್ಲಿ ನೀರಿನ ಸಮಸ್ಯೆ ಪ್ರಶಾಂತ್ ಎಸ್. ಮೈಸೂರು: ಮಹಾನಗರ ಪಾಲಿಕೆ ವಾರ್ಡ್ ಸಂಖ್ಯೆ ೬೨ರ…
ಚಿರಂಜೀವಿ ಸಿ ಹುಲ್ಲಹಳ್ಳಿ ಮೈಸೂರು: ಮಧ್ಯಪ್ರಾಚ್ಯ ದೇಶಗಳ ನಡುವಿನ ಯುದ್ಧದ ಪರಿಣಾಮ ಜಿಲ್ಲೆಯಲ್ಲಿ ತಿಂಗಳು ಕಳೆದರೂ ಗ್ಯಾಸ್ ಟ್ರಬಲ್ ತಗ್ಗಿಲ್ಲ.…