ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮಕ್ಕಳನ್ನೇ ಬೆಂಬಿಡದೇ ಕಾಡುತ್ತಿದೆ.
ರಾಜ್ಯದಲ್ಲಿ ಡೆಂಗ್ಯೂ ಆರ್ಭಟ ಯಾಕೋ ನಿಲ್ಲುವ ಹಾಗೆ ಕಾಣುತ್ತಿಲ್ಲ. ಅದರಲ್ಲೂ ಶಾಲಾಮಕ್ಕಳನ್ನೇ ಡೆಂಗ್ಯೂ ಹೆಮ್ಮಾರಿಯಂತೆ ಕಾಡುತ್ತಿದ್ದು, ಡೆಂಗ್ಯೂ ಜ್ವರ ಬಂದವರಲ್ಲಿ ಈ ಬಾರಿ ಮಕ್ಕಳೇ ಹೆಚ್ಚು ಟಾರ್ಗೆಟ್ ಆಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಡೆಂಗ್ಯೂ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಶಾಲೆಗಳಲ್ಲಿ ಹೊಸ ಪ್ಲಾನ್ ಮಾಡಿದೆ.
ಸಿಲಿಕಾನ್ ಸಿಟಿ ಬೆಂಗಳೂರು ಡೆಂಗ್ಯೂ ಹಾಟ್‌ಸ್ಪಾಟ್ ಆಗುತ್ತಿದ್ದು, ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಭಯಪಡುತ್ತಿದ್ದಾರೆ. ಶಾಲೆಗಳಲ್ಲಿ ಡೆಂಗ್ಯೂ ಬಗ್ಗೆ ಆರೋಗ್ಯ ಇಲಾಖೆ ಜಾಗೃತಿ ಮೂಡಿಸುತ್ತಿದ್ದು, ಮಕ್ಕಳು ಹಾಗೂ ಶಿಕ್ಷಕರು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಂಪೂರ್ಣವಾಗಿ ವಿವರ ನೀಡುತ್ತಿದೆ.
ಆರೋಗ್ಯ ಇಲಾಖೆಯು ಡೆಂಗ್ಯೂ ಜಾಸ್ತಿ ಕಂಡುಬರುತ್ತಿರುವ ಶಾಲೆಗಳ ಏರಿಯಾಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಅಗತ್ಯ ಕ್ರಮ ವಹಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.
ಮಕ್ಕಳನ್ನು ಬಾಧಿಸುತ್ತಿರುವ ಡೆಂಗ್ಯೂ ತಡೆಗೆ ಆರೋಗ್ಯ ಇಲಾಖೆ ಕಠಿಣ ಕ್ರಮ ಕೈಗೊಳ್ಳುತ್ತಿದ್ದು, ಮಕ್ಕಳ ಸುರಕ್ಷತೆಗೆ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಇದರ ಜೊತೆಗೆ ಮಕ್ಕಳ ಆರೋಗ್ಯದ ಬಗ್ಗೆ ಪೋಷಕರು ಕೂಡ ಗಮನಹರಿಸಬೇಕು ಎಂದು ಸೂಚನೆ ನೀಡಲಾಗಿದೆ.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…