ಬೆಂಗಳೂರು : ಚಿಲುಮೆ ಸಂಸ್ಥೆಯಲ್ಲಿ ಲೆಟರ್ ಹೆಡ್, ಚೆಕ್ ದೊರಕಿದ ವಿಚಾರವಾಗಿ ಸಚಿವರನ್ನು ವಿಚಾರಣೆ ಮಾಡುವ ದಮ್ಮು, ತಾಕತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಇಲ್ಲವೇ ಎಂದು ಕಾಂಗ್ರೆಸ್ ಸವಾಲು ಹಾಕಿದೆ.
ಸಚಿವರಿಗೂ ಚಿಲುಮೆ ಸಂಸ್ಥೆಗೂ ಏನು ಸಂಬಂಧ? ಬೇರೆಲ್ಲವನ್ನೂ ಪುಂಖಾನುಪುಂಖವಾಗಿ ಮಾತಾಡುವ ಮುಖ್ಯಮಂತ್ರಿಗಳು ಈ ಬಗ್ಗೆ ಮೌನವಾಗಿರುವುದೇಕೆ ? ಮುಖ್ಯಮಂತ್ರಿ ಕೂಡ ಈ ಅಕ್ರಮದಲ್ಲಿ ಪಾಲು ಹೊಂದಿರುವರೇ ಎಂದು ಅನುಮಾನ ವ್ಯಕ್ತ ಪಡಿಸಿದೆ.
ರಾಜಕೀಯ ಒತ್ತಡದಿಂದ ಚಿಲುಮೆ ಸಂಸ್ಥೆಗೆ ಸಹಕರಿಸಿದ್ದೆವು ಎಂದು ಅಧಿಕಾರಿಗಳು ವಿಚಾರಣೆ ವೇಳೆ ಹೇಳುತ್ತಿದ್ದಾರೆ. ಒತ್ತಡ ಹಾಕಿದ ರಾಜಕೀಯದವರು ಯಾರು? ಅವರ ಹಿತಾಸಕ್ತಿ ಏನಿತ್ತು? ಚಿಲುಮೆ ಸಂಸ್ಥೆಯ ಹಣದ ಮೂಲ ಯಾವುದು? ಚೆಕ್, ಲೆಟರ್ ಹೆಡ್ ಸಿಕ್ಕಿರುವ ಸಂಗತಿಯನ್ನು ಬಚ್ಚಿಡುತ್ತಿರುವುದೇಕೆ? ಅಕ್ರಮಗಳ ಮಹಾಪೋಷಕ ಬಸವರಾಜ ಬೊಮ್ಮಾಯಿ ಅವರೇ ಜನರಿಗೆ ಉತ್ತರಿಸಬೇಕು ಎಂದು ಒತ್ತಾಯಿಸಿದ್ದಾರೆ.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
ಚಿಲುಮೆ ಸಂಸ್ಥೆ ಅಕ್ರಮ : ಸಚಿವರನ್ನು ವಿಚಾರಣೆ ಮಾಡುವ ತಾಕತ್ತು ಸಿಎಂ ಗೆ ಇಲ್ಲವೆಂದ ಕಾಂಗ್ರೆಸ್
Previous Articleಕಿಕ್ ಬಾಕ್ಸಿoಗ್ ಸ್ಪರ್ಧೆ : ಶಶಾಂಕ್ ಗೆ ಚಿನ್ನದ ಪದಕ