ರಾಜ್ಯ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್‌ಗೆ ಸಿಗುತ್ತಾ ಅನುಮತಿ?: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗೆ ಅನುಮತಿ ನೀಡುವ ಸಂಬಂಧ ಪಟ್ಟಂತೆ ಬುಧವಾರ ಹಿರಿಯ ಅಧಿಕಾರಿಗಳು ಹಾಗೂ ಕಾನೂನು ತಜ್ಞರ ಜೊತೆ ಮಹತ್ವದ ಸಭೆ ನಡೆಸುವುದಾಗಿ ಗೃಹ ಸಚಿವ ಡಾ. ಜಿ ಪಮೇಶ್ವರ್ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕರ್ನಾಟಕ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ವೆಂಕಟೇಶ್ ಪ್ರಸಾದ್, ವಕ್ತಾರರಾದ ವಿನಯ್ ಕುಮಾರ್ ಹಾಗೂ ಸಂಸ್ಥೆಯ ಪದಾಧಿಕಾರಿಗಳು, ಆರ್‍ಸಿಬಿಯ ಪ್ರತಿನಿಧಿಗಳು ತಮ್ಮನ್ನು ಭೇಟಿ ಮಾಡಿದ್ದಾರೆ. ಈ ಹಿಂದೆ ಆರ್‍ಸಿಬಿ ವಿಜಯೋತ್ಸವದ ವೇಳೆಯಲ್ಲಿ ಕಾಲ್ತುಳಿತದಲ್ಲಿ 11 ಮಂದಿ ಜೀವಹಾನಿಯಾಗಿದೆ. ಆ ಪ್ರಕರಣದ ತನಿಖೆಗೆ ನಿವೃತ್ತ ನ್ಯಾಯಮೂರ್ತಿ ಮೈಕಲ್ ಕುನ್ಹಾ ಅವರ ನೇತೃತ್ವದಲ್ಲಿ ನ್ಯಾಯಾಂಗ ಸಮಿತಿಯನ್ನು ರಚಿಸಲಾಗಿತ್ತು. ಸಮಿತಿ ವರದಿ ಆಧರಿಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಕ್ರಿಕೆಟ್ ಸಂಸ್ಥೆಗೆ ಪತ್ರ ಬರೆಯಲಾಗಿದೆ. ಜೊತೆಗೆ ಮುಂಜಾಗ್ರತಾ ಕ್ರಮಗಳನ್ನು ಪರಿಶೀಲನೆ ನಡೆಸಲು ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರರಾವ್, ಪೊಲೀಸ್‌ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರನ್ನು ಒಳಗೊಂಡ ಹಿರಿಯ ಅಧಿಕಾರಿಗಳ ಸಮಿತಿಯನ್ನು ರಚಿಸಲಾಗಿತ್ತು. ಅವರು ಕಾಲಕಾಲಕ್ಕೆ ಕ್ರೀಡಾಂಗಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುಮಾರು 18 ಅಂಶಗಳನ್ನು ಅನುಷ್ಠಾನಗೊಳಿಸಲು ಸೂಚನೆ ನೀಡಲಾಗಿದೆ ಎಂದರು.

ಈ ನಡುವೆ ಐಪಿಎಲ್ ಮತ್ತು ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಾವಳಿಗಳು ಎದುರಾಗಿವೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯಾವಳಿಯನ್ನು ನಡೆಸಲು ಪೊಲೀಸ್ ಇಲಾಖೆಯ ಪೂರ್ವ ಅನುಮತಿ ದೊರೆತರೆ ಮಾತ್ರ ಪಂದ್ಯಾವಳಿಗಳ ವೇಳಾಪಟ್ಟಿಯಲ್ಲಿ ಬೆಂಗಳೂರು ಸೇರ್ಪಡೆಯಾಗುತ್ತದೆ. ಈ ಹಿನ್ನಲೆಯಲ್ಲಿ ತಾವು ಬಿಬಿಎಂಪಿ ಮತ್ತು ಪೊಲೀಸ್ ಇಲಾಖೆಯ ಆಯುಕ್ತರು ಹಾಗೂ ಕಾನೂನು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಬುಧವಾರ ಚರ್ಚೆ ನಡೆಸುವುದಾಗಿ ಹೇಳಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

13 hours ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

13 hours ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

14 hours ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

14 hours ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

14 hours ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

14 hours ago