ಚಿತ್ರದುರ್ಗ: ಚಿತ್ರದುರ್ಗದ ಚಳ್ಳಕೆರೆ ಗೇಟ್ ಸಮೀಪವಿರುವ ಜೈಲ್ ರಸ್ತೆಯಲ್ಲಿರುವ ಪಾಳುಬಿದ್ದ ಮನೆಯೊಂದರಲ್ಲಿ ಐದು ಅಸ್ಥಿಪಂಜರಗಳು ಪತ್ತೆಯಾಗಿವೆ. ಚಿತ್ರದುರ್ಗದ ದೊಡ್ಡ ಸಿದ್ದವ್ವನಹಳ್ಳಿಯ ಜಗನ್ನಾಥ್ ರೆಡ್ಡಿ ಎಂಬವರಿಗೆ ಸೇರಿದ ಮನೆ ಇದಾಗಿದೆ. ಇವರು ಪಿಡಬ್ಲ್ಯುಡಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಆಗಿದ್ದು ನಿವೃತ್ತರಾಗಿದ್ದರು. ಮನೆಯ ಮುಂದೆ ನಿವೃತ್ತ ಇಂಜಿನಿಯರ್ ಎಂಬ ಬೋರ್ಡ್ ಇದೆ.
ಸ್ಥಳೀಯ ಪವನ್ ಕುಮಾರ್ ಎಂಬುವರು ಚಿತ್ರದುರ್ಗ ಬಡಾವಣೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಇವೆಲ್ಲವೂ ಒಂದೇ ಕುಟುಂಬಸ್ಥರ ಶವಗಳು ಎಂದು ಹೇಳಲಾಗುತ್ತಿದ್ದು, ಸುಮಾರು 4 ವರ್ಷಗಳ ಹಿಂದೆಯೇ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಜಗನ್ನಾಥ ರೆಡ್ಡಿಗೆ 3 ಜನ ಗಂಡು ಮಕ್ಕಳು ಹಾಗೂ ಒಬ್ಬರು ಹೆಣ್ಣು ಮಗಳು ಎಂದು ಹೇಳಲಾಗಿದೆ. ಕುಟುಂಬಸ್ಥರಿಗೆ ಗಂಭೀರ ಆರೋಗ್ಯ ಸಮಸ್ಯೆ ಇತ್ತು ಎಂದು ಹೇಳಲಾಗುತ್ತಿದೆ.
2022ರ ಬಳಿಕ ಈ ಮನೆಯವರು ಯಾರಿಗೂ ಕಾಣಿಸಿಕೊಂಡಿಲ್ಲ. ಈಗ ಅವರ ಮನೆಯಲ್ಲಿ ಅಸ್ತಿಪಂಜರಗಳು ತೊರೆತಿದ್ದು, ಈ ಪ್ರಕರಣ ಹೆಚ್ಚಿನ ಕುತೂಹಲಕ್ಕೆ ದಾರಿಮಾಡಿ ಕೊಟ್ಟಿದೆ. ಸಿಕ್ಕ ಐದು ಅಸ್ಥಿಪಂಜರಗಳು ಯಾರು, ಯಾರದು? ಎಲ್ಲರ ಸಾವಿಗೆ ಕಾರಣವೇನು? ನಾಲ್ಕಾರು ವರ್ಷಗಳಾದರೂ ಈ ಸಾವುಗಳು ಯಾರ ಗಮನಕ್ಕೂ ಬರದೇ ಇದ್ದುದು ಹೇಗೆ? ಎಂಬೆಲ್ಲಾ ಪ್ರಶ್ನೆಗಳು ಮೂಡತೊಡಗಿದ್ದು, ಸ್ಥಳೀಯರು ಆತಂಕಕ್ಕೀಡಾಗಿದ್ದಾರೆ.
ಈ ಸಂಬಂಧ ಚಿತ್ರದುರ್ಗಾ ಬಡಾವಣೆ ಪೊಲೀಸರು ಪ್ರಕರಣ ದಾಖಲಿಸಿದ್ದು, ತನಿಖೆ ಕೈಗೊಂಡಿದ್ದಾರೆ. ಜೊತೆಗೆ ಬೆರಳಚ್ಚು ತಂಡ ಮತ್ತು ವಿಧಿ ವಿಜ್ಞಾನ ತಂಡ ಕೂಡಾ ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಕಂದಾಯ ದಾಖಲೆಗಳ ಗಣಕೀಕರಣ ತಂತ್ರಾಂಶದಲ್ಲಿ ಅಭಿಲೇಖಾಲಯದ ದಾಖಲೆಗಳು ಸ್ಕ್ಯಾನಿಂಗ್ ಬಿ. ಟಿ. ಮೋಹನ್ ಕುಮಾರ್ ಮಂಡ್ಯ: ಕಂದಾಯ ದಾಖಲೆಗಳ ಗಣಕೀಕರಣ…
ನ. ೨೩ಕ್ಕೆ ಹನೂರು ಪಪಂ ೧೨ನೇ ವಾರ್ಡ್ ಉಪಚುನಾವಣೆ; ನಾಮಪತ್ರ ಸಲ್ಲಿಕೆಗೆ ಎರಡು ದಿನ ಬಾಕಿ ಮಹಾದೇಶ್ ಎಂ ಗೌಡ…
ಸ್ಪೇನಿನಲ್ಲಿ ನನ್ನನ್ನು ಬಹಳಮಟ್ಟಿಗೆ ಕಲಕಿದ ವಿಷಯ ಎಂದರೆ ತೀರಾ ಎಳೆವಯಸ್ಸಿನ ಹುಡುಗ ಹುಡುಗಿಯರು ಮಕ್ಕಳನ್ನು ಹೊತ್ತು ಓಡಾಡುತ್ತಿದ್ದದ್ದು. ಕಾಲೇಜಿಗೆ ಹೋಗಬೇಕಾದ…
ದೆಹಲಿ ಕಣ್ಣೋಟ, ಶಿವಾಜಿ ಗಣೇಶನ್ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಈ ವರ್ಷದ ಕೊನೆಯ ಚುನಾವಣೆ. ಕಾಂಗ್ರೆಸ್ ಮತ್ತು ಬಿಜೆಪಿ ನೇತೃತ್ವದ…
ವಾಣಿವಿಲಾಸ ಮಾರುಕಟ್ಟೆ ಒಳಗಿನ ಶೌಚಾಲಯದ ದುಸ್ಥಿತಿ; ಬಹುತೇಕ ಶೌಚಾಲಯಗಳಲ್ಲೂ ಇದೇ ಸ್ಥಿತಿ ಹೆಚ್. ಎಸ್. ದಿನೇಶ್ ಕುಮಾರ್ ಮೈಸೂರು: ದೇಶದ…
ಕೆ. ಬಿ. ರಮೇಶನಾಯಕ ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಽಕಾರದಲ್ಲಿ ೫೦:೫೦ ಅನುಪಾತದಡಿ ನಿವೇಶನಗಳ ಹಂಚಿಕೆಯಲ್ಲಿ ನಡೆದಿ ರುವ ಹಗರಣ ಕುರಿತು…