ರಾಜ್ಯ

ಚಿತ್ರದುರ್ಗ ಬಸ್‌ ದುರಂತ | ಬಸ್‌ ಚಾಲಕ ಮೊಹಮ್ಮದ್‌ ರಫೀಕ್‌ ಸಾವು ; ಸಾವಿನ ಸಂಖ್ಯೆ 7ಕ್ಕೆ ಏರಿಕೆ

ಚಿತ್ರದುರ್ಗಾ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್ ಹೊತ್ತಿ ಉರಿದ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡು ಸಾವು – ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಸೀ ಬರ್ಡ್ ಬಸ್ ಚಾಲಕ ಚಿಕಿತ್ಸೆ ಫಲಕಾರಿಯಾದೇ ಮೃತಪಟ್ಟಿದ್ದಾರೆ. ಈ ಮೂಲಕ ಆಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 7 ಕ್ಕೆ ಏರಿಕೆಯಾಗಿದೆ.

ಜೊತೆಗೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುಗಳ ಚಿಕಿತ್ಸೆ ಮುಂದುವರಿದಿದೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳುಗಳಲ್ಲಿ ಸದ್ಯ ಒಬ್ಬರು ಡಿಸ್ಚಾರ್ಜ್ ಆಗಿದ್ದಾರೆ. ಉಳಿದ ಮೂವರಿಗೆ ಬರ್ನ್ ವಾರ್ಡ್‍ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೊಂದೆಡೆ, ಮೃತದೇಹಗಳು ಸಂಪೂರ್ಣ ಸುಟ್ಟು ಕರಕಲಾಗಿರುವುದರಿಂದ ಗುರುತು ಪತ್ತೆಗೆ ಸಾಧ್ಯವಾಗದ ಹಿನ್ನೆಲೆಯಲ್ಲಿ ಡಿಎನ್ ಎ ಪರೀಕ್ಷೆಗೆ ಮುಂದಾಗಿದ್ದಾರೆ.

ಘಟನೆಯಲ್ಲಿ ಮಹಮದ್ ರಫೀಕ್ ತೀವ್ರವಾಗಿ ಗಾಯಗೊಂಡಿದ್ದರು. ಅಪಘಾತದ ರಭಸಕ್ಕೆ ಅವರ ಎರಡು ಕಾಲುಗಳು ಮತ್ತು ಒಂದು ಕೈ ಮುರಿದಿದ್ದು, ಇದೀಗ ಸಾವನಪ್ಪಿದ್ದಾರೆ.

ಬಸ್ ದುರಂತದಲ್ಲಿ ಚಾಲಕ ಮೊಹಮ್ಮದ್ ರಫೀಕ್ ಗಂಭೀರವಾಗಿ ಗಾಯಗೊಂಡಿದ್ದರು. ಅಪಘಾತದ ರಭಸಕ್ಕೆ ಅವರ ಎರಡು ಕಾಲುಗಳು ಮತ್ತು ಒಂದು ಕೈ ಮುರಿದಿತ್ತು.ಅಪಘಾತದ ನಂತರ ತ್ವರಿತವಾಗಿ ಅವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಾತ್ರಿ ತುರ್ತು ಆಪರೇಷನ್ ನಡೆಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ.

ಹಾವೇರಿ ಜಿಲ್ಲೆ ಶಿಗ್ಗಾಂವಿ ನಿವಾಸಿಯಾಗಿದ್ದ ರಫೀಕ್ ಅಪಘಾತದ ಬಳಿಕ ಗಂಭೀರವಾಗಿ ಗಾಯಗೊಂಡಿದ್ದರು.

ಇದನ್ನು ಓದಿ: ಅರಮನೆ ಬಳಿ ಹೀಲಿಯಂ ಸಿಲಿಂಡರ್ ಸ್ಫೋಟ : ಮಹತ್ವದ ಮಾಹಿತಿ ಕೊಟ್ಟ ಗೃಹ ಸಚಿವ ಪರಮೇಶ್ವರ

ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಸೀಬರ್ಡ್ ಎಕ್ಸಿಕ್ಯೂಟಿವ್ ಸ್ಲೀಪರ್ ಬಸ್‍ಗೆ ಎದುರಿನಿಂದ ಬಂದ ಕಂಟೈನರ್ ಲಾರಿ ಡಿವೈಡರ್ ದಾಟಿ ಡಿಕ್ಕಿ ಹೊಡೆದಿತ್ತು. ಡಿಕ್ಕಿಯ ರಭಸಕ್ಕೆ ಬಸ್ ಬೆಂಕಿಗೆ ಆಹುತಿಯಾಗಿ ಸಂಪೂರ್ಣ ಕರಕಲಾಗಿತ್ತು.ಬಸ್‍ನಲ್ಲಿ ಒಟ್ಟು 33 ಪ್ರಯಾಣಿಕರು ಇದ್ದರು. ಇವರಲ್ಲಿ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಕಂಟೈನರ್ ಚಾಲಕ ಸೇರಿದಂತೆ ಮೃತರ ಸಂಖ್ಯೆ 6 ಎಂದು ಪೊಲೀಸರು ದೃಢಪಡಿಸಿದ್ದರು.

ಮೃತರಲ್ಲಿ ಬಿಂಧು ಮತ್ತು ಅವರ ನಾಲ್ಕೂವರೆ ವರ್ಷದ ಮಗಳು ಗ್ರೇಯಾ, ಮಾನಸ, ನವ್ಯ, ರಶ್ಮಿ ಮತ್ತು ಕಂಟೈನರ್ ಚಾಲಕ ಇದ್ದಾರೆ. ಮೃತದೇಹಗಳ ಗುರುತು ಪತ್ತೆಯಾಗಿ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ.

ಡಿಎನ್ ಎ ಪರೀಕ್ಷೆ
ಚಿತ್ರದುರ್ಗದ ಹಿರಿಯೂರು ಬಳಿ ಗುರುವಾರ ಸಂಭವಿಸಿದ ಬಸ್ ಬಸ್ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದ್ದು, ಈ ನಡುವೆ ಮೃತದೇಹಗಳ ಅಸ್ಥಿಪಂಜರಗಳ ಸ್ಯಾಂಪಲ್ ಪಡೆದಿರುವ ವೈದ್ಯರು ಡಿಎನ್ ಎ ಪರೀಕ್ಷೆಗೆ ರವಾನಿಸಿದ್ದಾರೆಂದು ತಿಳಿದುಬಂದಿದೆ.

ಮೃತದೇಹಗಳ ಡಿಎ ಪರೀಕ್ಷೆಗಾಗಿ ಮೃತರ ಸಂಬಂಧಿಕರ ರಕ್ತದ ಮಾದರಿಗಳನ್ನು ವೈದ್ಯರು ಸಂಗ್ರಹಿಸಿದ್ದು, ಇದೀಗ ಬೋನ್ ಸ್ಯಾಂಪಲ್ ಸಂಗ್ರಹಿಸಿ, ಪರೀಕ್ಷೆಗೆ ಹುಬ್ಬಳ್ಳಿ ಲ್ಯಾಬ್’ಗೆ ರವಾನಿಸಿದ್ದಾರೆ.ಒಂದೆರಡು ದಿನದಲ್ಲಿ ಡಿಎನ್‍ಎ ವರದಿ ಪಡೆಯಲು ಅಧಿಕಾರಿಗಳು ಪ್ರಯತ್ನಿಸುತ್ತಿದ್ದು, ತ್ವರಿತವಾಗಿ ವರದಿ ನೀಡುವಂತೆ ಮನವಿ ಮಾಡುವ ಭರವಸೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬಂಡೀಪುರ, ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭ : ಸಿಎಂ

ಬೆಂಗಳೂರು : ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭಿಸಲು ಮತ್ತು ಧಾರಣಾ ಶಕ್ತಿ ಮತ್ತು ಹುಲಿಗಳು ನಾಡಿನತ್ತ…

12 hours ago

ಜ.5, 6ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಪ್ರವಾಸ ; ತವರಲ್ಲಿ ಸಂಭ್ರಮ ಸಾಧ್ಯತೆ?

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿನಲ್ಲಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿದ್ದಾರೆ. ಜ.5ರಂದು ಬೆಳಿಗ್ಗೆ…

12 hours ago

ಜ.4ರಂದು ʼಚಾ.ಬೆಟ್ಟಕ್ಕೆ ನಡಿಗೆʼ ಜಾಗೃತಿ ಜಾಥ ; ಬೆಂಬಲಿಸಲು ಮನವಿ

ಮೈಸೂರು : ಅರಮನೆ ನಗರಿ ಮೈಸೂರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದ ಸಂರಕ್ಷಣೆ ಮತ್ತು ಉಳಿವಿಗಾಗಿ ಜ.4ರಂದು(ಭಾನುವಾರ) ಜಾಗೃತಿ ಆಂದೋಲನವನ್ನು…

12 hours ago

ದೇಶದ ಸ್ವಚ್ಛ ನಗರ ಇಂದೋರ್‌ನಲ್ಲಿ ಕಲುಷಿತ ನೀರು ಸೇವನೆಯಿಂದ 11 ಮಂದಿ ಸಾವು!

ಭೋಪಾಲ್ : ಇಂದೋರ್‌ನ ಭಗೀರಥಪುರದಲ್ಲಿ ಕಲುಷಿತ ಕುಡಿಯುವ ನೀರು ಸೇವನೆಯಿಂದ 11 ಜೀವಗಳು ಬಲಿಯಾಗಿವೆ. ಮತ್ತು 1400ಕ್ಕೂ ಹೆಚ್ಚು ನಿವಾಸಿಗಳ…

13 hours ago

ಬಳ್ಳಾರಿ ಘರ್ಷಣೆ | ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಲಿ ; ಬಿವೈವಿ ಆಗ್ರಹ

ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…

15 hours ago

ಬಳ್ಳಾರಿ ಘರ್ಷಣೆ | ಕೈ ಕಾರ್ಯಕರ್ತ ಸಾವು, ಘಟನೆ ಬಗ್ಗೆ ಸಿಎಂ ಹೇಳಿದ್ದೇನು?

ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ  ಬ್ಯಾನರ್‌ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್‌ ಆಗಿ…

16 hours ago