ಚಿತ್ರದುರ್ಗಾ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್ ಹೊತ್ತಿ ಉರಿದ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡು ಸಾವು – ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಸೀ ಬರ್ಡ್ ಬಸ್ ಚಾಲಕ ಚಿಕಿತ್ಸೆ ಫಲಕಾರಿಯಾದೇ ಮೃತಪಟ್ಟಿದ್ದಾರೆ. ಈ ಮೂಲಕ ಆಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 7 ಕ್ಕೆ ಏರಿಕೆಯಾಗಿದೆ.
ಜೊತೆಗೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುಗಳ ಚಿಕಿತ್ಸೆ ಮುಂದುವರಿದಿದೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳುಗಳಲ್ಲಿ ಸದ್ಯ ಒಬ್ಬರು ಡಿಸ್ಚಾರ್ಜ್ ಆಗಿದ್ದಾರೆ. ಉಳಿದ ಮೂವರಿಗೆ ಬರ್ನ್ ವಾರ್ಡ್‍ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೊಂದೆಡೆ, ಮೃತದೇಹಗಳು ಸಂಪೂರ್ಣ ಸುಟ್ಟು ಕರಕಲಾಗಿರುವುದರಿಂದ ಗುರುತು ಪತ್ತೆಗೆ ಸಾಧ್ಯವಾಗದ ಹಿನ್ನೆಲೆಯಲ್ಲಿ ಡಿಎನ್ ಎ ಪರೀಕ್ಷೆಗೆ ಮುಂದಾಗಿದ್ದಾರೆ.
ಘಟನೆಯಲ್ಲಿ ಮಹಮದ್ ರಫೀಕ್ ತೀವ್ರವಾಗಿ ಗಾಯಗೊಂಡಿದ್ದರು. ಅಪಘಾತದ ರಭಸಕ್ಕೆ ಅವರ ಎರಡು ಕಾಲುಗಳು ಮತ್ತು ಒಂದು ಕೈ ಮುರಿದಿದ್ದು, ಇದೀಗ ಸಾವನಪ್ಪಿದ್ದಾರೆ.
ಬಸ್ ದುರಂತದಲ್ಲಿ ಚಾಲಕ ಮೊಹಮ್ಮದ್ ರಫೀಕ್ ಗಂಭೀರವಾಗಿ ಗಾಯಗೊಂಡಿದ್ದರು. ಅಪಘಾತದ ರಭಸಕ್ಕೆ ಅವರ ಎರಡು ಕಾಲುಗಳು ಮತ್ತು ಒಂದು ಕೈ ಮುರಿದಿತ್ತು.ಅಪಘಾತದ ನಂತರ ತ್ವರಿತವಾಗಿ ಅವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಾತ್ರಿ ತುರ್ತು ಆಪರೇಷನ್ ನಡೆಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವಿ ನಿವಾಸಿಯಾಗಿದ್ದ ರಫೀಕ್ ಅಪಘಾತದ ಬಳಿಕ ಗಂಭೀರವಾಗಿ ಗಾಯಗೊಂಡಿದ್ದರು.
ಇದನ್ನು ಓದಿ: ಅರಮನೆ ಬಳಿ ಹೀಲಿಯಂ ಸಿಲಿಂಡರ್ ಸ್ಫೋಟ : ಮಹತ್ವದ ಮಾಹಿತಿ ಕೊಟ್ಟ ಗೃಹ ಸಚಿವ ಪರಮೇಶ್ವರ
ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಸೀಬರ್ಡ್ ಎಕ್ಸಿಕ್ಯೂಟಿವ್ ಸ್ಲೀಪರ್ ಬಸ್‍ಗೆ ಎದುರಿನಿಂದ ಬಂದ ಕಂಟೈನರ್ ಲಾರಿ ಡಿವೈಡರ್ ದಾಟಿ ಡಿಕ್ಕಿ ಹೊಡೆದಿತ್ತು. ಡಿಕ್ಕಿಯ ರಭಸಕ್ಕೆ ಬಸ್ ಬೆಂಕಿಗೆ ಆಹುತಿಯಾಗಿ ಸಂಪೂರ್ಣ ಕರಕಲಾಗಿತ್ತು.ಬಸ್‍ನಲ್ಲಿ ಒಟ್ಟು 33 ಪ್ರಯಾಣಿಕರು ಇದ್ದರು. ಇವರಲ್ಲಿ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಕಂಟೈನರ್ ಚಾಲಕ ಸೇರಿದಂತೆ ಮೃತರ ಸಂಖ್ಯೆ 6 ಎಂದು ಪೊಲೀಸರು ದೃಢಪಡಿಸಿದ್ದರು.
ಮೃತರಲ್ಲಿ ಬಿಂಧು ಮತ್ತು ಅವರ ನಾಲ್ಕೂವರೆ ವರ್ಷದ ಮಗಳು ಗ್ರೇಯಾ, ಮಾನಸ, ನವ್ಯ, ರಶ್ಮಿ ಮತ್ತು ಕಂಟೈನರ್ ಚಾಲಕ ಇದ್ದಾರೆ. ಮೃತದೇಹಗಳ ಗುರುತು ಪತ್ತೆಯಾಗಿ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ.
ಡಿಎನ್ ಎ ಪರೀಕ್ಷೆ
ಚಿತ್ರದುರ್ಗದ ಹಿರಿಯೂರು ಬಳಿ ಗುರುವಾರ ಸಂಭವಿಸಿದ ಬಸ್ ಬಸ್ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದ್ದು, ಈ ನಡುವೆ ಮೃತದೇಹಗಳ ಅಸ್ಥಿಪಂಜರಗಳ ಸ್ಯಾಂಪಲ್ ಪಡೆದಿರುವ ವೈದ್ಯರು ಡಿಎನ್ ಎ ಪರೀಕ್ಷೆಗೆ ರವಾನಿಸಿದ್ದಾರೆಂದು ತಿಳಿದುಬಂದಿದೆ.
ಮೃತದೇಹಗಳ ಡಿಎ ಪರೀಕ್ಷೆಗಾಗಿ ಮೃತರ ಸಂಬಂಧಿಕರ ರಕ್ತದ ಮಾದರಿಗಳನ್ನು ವೈದ್ಯರು ಸಂಗ್ರಹಿಸಿದ್ದು, ಇದೀಗ ಬೋನ್ ಸ್ಯಾಂಪಲ್ ಸಂಗ್ರಹಿಸಿ, ಪರೀಕ್ಷೆಗೆ ಹುಬ್ಬಳ್ಳಿ ಲ್ಯಾಬ್’ಗೆ ರವಾನಿಸಿದ್ದಾರೆ.ಒಂದೆರಡು ದಿನದಲ್ಲಿ ಡಿಎನ್‍ಎ ವರದಿ ಪಡೆಯಲು ಅಧಿಕಾರಿಗಳು ಪ್ರಯತ್ನಿಸುತ್ತಿದ್ದು, ತ್ವರಿತವಾಗಿ ವರದಿ ನೀಡುವಂತೆ ಮನವಿ ಮಾಡುವ ಭರವಸೆ ನೀಡಿದ್ದಾರೆ.
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…