ರಾಜ್ಯ

ಚಿತ್ರದುರ್ಗದಲ್ಲಿ ಬಸ್‌ ಅಪಘಾತ ಪ್ರಕರಣ: ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್‌ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ ಹಾಗೂ ಗಾಯಗೊಂಡವರಿಗೆ ತಲಾ 50,000 ರೂ ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಹಾಗೂ ಗಾಯಗೊಂಡವರಿಗೆ 50,000 ರೂ ಪರಿಹಾರ ನೀಡಲಾಗುವುದು.

ಘಟನೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು, ಸಂತ್ರಸ್ತರ ನೆರವಿಗೆ ನಿಲ್ಲುವಂತೆ ಸೂಚಿಸಿದ್ದೇನೆ. ಈ ಬಗ್ಗೆ ತನಿಖೆ ನಡೆಸಿ ಅಪಘಾತಕ್ಕೆ ಕಾರಣ ಪತ್ತೆ ಮಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಘಟನೆಯಲ್ಲಿ ಗಾಯಗೊಂಡವರು ಆದಷ್ಟು ಶೀಘ್ರದಲ್ಲೇ ಗುಣಮುಖರಾಗಲಿ. ಮೃತರ ಆತ್ಮಕ್ಕೆ ಶಾಂತಿ ಲಭಿಸಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ:  ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…

1 hour ago

ಗಾಂಧಿ ಹಾದಿಯಲ್ಲಿ ಹತಳಾದ ಮಾತಂಗಿನಿ ಹಜ್ರಾ

ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…

2 hours ago

ಧರ್ಮವೆಂದು ತಿಳಿದು ತಿಗಣೆ ಇತ್ಯಾದಿಗಳನ್ನು ಕೊಲ್ಲುತ್ತಿದ್ದೆ

ನನ್ನ ಆರು ಏಳನೆಯ ವಯಸ್ಸಿನಿಂದ ಹದಿನಾರನೆಯ ವಯಸ್ಸಿನವರೆಗೆ ಪಾಠಶಾಲೆಯಲ್ಲಿ ವಿದ್ಯೆಯನ್ನು ಕಲಿತೆ. ಆದರೆ ಸ್ಕೂಲಿನಲ್ಲಿ ನನಗೆ ಯಾವ ಧಾರ್ಮಿಕ ಶಿಕ್ಷಣವೂ…

2 hours ago

ಜೂ.28ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

ನವೀನ್ ಡಿಸೋಜ ಮಡಿಕೇರಿ: ಜೂ.೨೮ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ…

2 hours ago

ಅಕ್ರಮ ಮದ್ಯ ಮಾರಾಟ: ಕಡಿವಾಣ ಕಾರ್ಯಾಚರಣೆ

ದಿನೇಶ್ ಕುಮಾರ್ ಹೆಚ್.ಎಸ್. ಅಗ್ನಿ ಅವಘಡದ ಬಳಿಕ ಎಚ್ಚೆತ್ತ ಅಧಿಕಾರಿಗಳು ಮೈಸೂರು: ನಗರದ ದಟ್ಟಗಳ್ಳಿಯ ಮಾರಾ ರೆಸ್ಟೋ ಬಾರ್‌ನಲ್ಲಿ ನಡೆದ…

2 hours ago

ಓದುಗರ ಪತ್ರ: ವಂಚನೆ ತಡೆಗಾಗಿ ನಿರ್ಬಂಧ

ನೀಟ್ -ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಇದೇ ಜೂನ್ ೨೧ ರಂದು ಮರು ಪರೀಕ್ಷೆ ನಡೆಯಲಿದೆ. ವಂಚನೆ ಜಾಲ…

3 hours ago