ಬೆಂಗಳೂರು : ಚಿತ್ರದುರ್ಗದ ಹಿರಿಯೂರು ಬಳಿ ಇಂದು ಬೆಳಗಿನ ಜಾವ ಸಂಭವಿಸಿದ ರಸ್ತೆ ಅಪಘಾತದ ಮಾರ್ಗದಲ್ಲಿ ಶಾಲಾ ಮಕ್ಕಳು ಪ್ರಯಾಣಿಸುತ್ತಿದ್ದ ಪ್ರವಾಸದ ಬಸ್ ಕೂದಲೆಳೆಯ ಅಂತರದಿಂದ ಪಾರಾಗಿದೆ.
ಟಿ.ದಾಸರಹಳ್ಳಿಯ ಶಾಲೆಯೊಂದರ 42 ಮಕ್ಕಳನ್ನು ದಾಂಡೇಲಿಗೆ ಪ್ರವಾಸಕ್ಕಾಗಿ ಬಸ್ ನಲ್ಲಿ ಕರೆದುಕೊಂಡು ಹೋಗಲಾಗುತ್ತಿತ್ತು. ರಾಷ್ಟ್ರೀಯ ಹೆದ್ದಾರಿ 48ರ ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಇಂದು ಬೆಳಗಿನ ಜಾವ ಗೋಕರ್ಣಕ್ಕೆ ಹೋಗುತ್ತಿದ್ದ ಸೀಬರ್ಡ್ ಖಾಸಗಿ ಬಸ್ ಪಕ್ಕದಲ್ಲೇ ಸಮನಾಂತರದಲ್ಲಿ ಈ ಶಾಲಾ ಪ್ರವಾಸಿ ಬಸ್ ಹೋಗುತ್ತಿತ್ತು. ಖಾಸಗಿ ಬಸ್ ಗೆ ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಬಸ್ ನಿಯಂತ್ರಣ ಕಳೆದುಕೊಂಡು ಶಾಲಾ ಪ್ರವಾಸಿ ಬಸ್‍ಗೆ ತಾಗಿದೆ. ಈ ಬಸ್ ಚಾಲಕನ ಸಮಯಪ್ರಜ್ಞೆಯಿಂದ ಬಸ್‌ನ್ನು ನಿಯಂತ್ರಣಕ್ಕೆ ತೆಗೆದುಕೊಂಡು ಸ್ವಲ್ಪ ಮುಂದೆ ಹೋಗಿ ಚರಂಡಿ ಸಮೀಪ ನಿಲ್ಲಿಸುವ ಮೂಲಕ ಶಾಲಾ ಮಕ್ಕಳ ಪ್ರಾಣ ಉಳಿಸಿ ನಿಟ್ಟುಸಿರು ಬಿಟ್ಟಿದ್ದಾರೆ.
ಇದನ್ನು ಓದಿ: ಪಕ್ಷದ ಅಧ್ಯಕ್ಷನಾಗಿ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ: ಡಿಸಿಎಂ ಡಿ.ಕೆ.ಶಿವಕುಮಾರ್
ನಂತರ ಈ ವಿಷಯವನ್ನು ತಿಳಿಸಿ ಬೇರೆ ಬಸ್‌ನ್ನು ಸ್ಥಳಕ್ಕೆ ಕರೆಸಿಕೊಂಡು ಶಾಲಾ ಮಕ್ಕಳನ್ನು ಆ ಬಸ್‍ನಲ್ಲಿ ಕಳುಹಿಸಿದ್ದು, ಮಕ್ಕಳು ತಮ್ಮ ಪ್ರವಾಸ ಮುಂದುವರೆಸಿದ್ದಾರೆ. ಈ ಪ್ರವಾಸಿ ಬಸ್ ಚಾಲಕ ಸ್ಥಳದಲ್ಲಿದ್ದು, ಪೊಲೀಸರ ತನಿಖೆಗೆ ಸಹಕರಿಸಿದ್ದಾರೆ. ತಮ್ಮ ಬಸ್‍ಗೆ ಸ್ವಲ್ಪ ಹಾನಿಯಾಗಿದ್ದರೂ ಅದೃಷ್ಟವಶಾತ್ ಮಕ್ಕಳಿಗಾಗಲೀ, ಶಿಕ್ಷಕರಿಗಾಗಲೀ ಯಾರಿಗೂ ಗಾಯಗಳಾಗಿಲ್ಲ ಎಂದು ಶಾಲಾ ಬಸ್ ಚಾಲಕ ಸಚಿನ್ ಹೇಳಿದ್ದಾರೆ.
ಬೆಂಗಳೂರು : ಮಾಹಿತಿ ಕೊರತೆ ಅಥವಾ ತಾಂತ್ರಿಕ ತೊಂದರೆಗಳಿಂದಾಗಿ ಅರ್ಹ ರೈತರು ಕುಸುಮ್-ಬಿ ಯೋಜನೆಯಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಕರ್ನಾಟಕ ನವೀಕರಿಸಬಹುದಾದ…
ಮೈಸೂರು : ಡಾ.ಬಿ.ಆರ್.ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ದಹಿಸಿದ ದಿನದ ಅಂಗವಾಗಿ ದಲಿತ ಸಂಘರ್ಷ ಸಮಿತಿ ವತಿಯಿಂದ ಮನುಸ್ಮೃತಿಯನ್ನು ಸುಡುವ ಮೂಲಕ…
ಮೈಸೂರು : ಮೇಲ್ವರ್ಗದ ಯುವತಿಯೊಬ್ಬಳು ದಲಿತ ಯುವಕನನ್ನು ಪ್ರೀತಿಸಿ ಮದುವೆಯಾದ ಕಾರಣಕ್ಕೆ ಸ್ವಂತ ಮಗಳನ್ನೆ ಹೆತ್ತ ಅಪ್ಪ-ಅಮ್ಮ-ಅಣ್ಣಂದಿರು ಕೊಲೆ ಮಾಡುವ…
ಚಾಮರಾಜನಗರ : ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ಸುಟ್ಟ ಹಾಕಿದ ದಿನದ ಅಂಗವಾಗಿ ವಿವಿಧ ಸಂಘಟನೆಗಳ ಮುಖಂಡರು…
ಹೊಸದಿಲ್ಲಿ : ಕೇಂದ್ರ ಸಚಿವರಾದ ಅಶ್ವಿನ್ ವೈಷ್ಣವ್ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ನಡುವೆ ಕರ್ನಾಟಕದಲ್ಲಿ ಉದ್ಯೋಗ…
ಬೆಂಗಳೂರು: ನಾನು ಪಕ್ಷದ ಅಧ್ಯಕ್ಷನಾಗಿ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ. ಪಕ್ಷಕ್ಕಾಗಿ ಎಲ್ಲವನ್ನೂ ಮಾಡಿದ್ದೇನೆ. ನಾನು ಸ್ಟೇಜ್ ಮೇಲೆ ಕೂತು…