ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮುರುಘಾಶ್ರೀಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಕ್ಷ್ಯಗಳ ವಿಚಾರಣೆ ಬಹುತೇಕ ಪೂರ್ಣಗೊಂಡ ಹಿನ್ನೆಲೆಯಲ್ಲಿ ಜಾಮೀನು ನೀಡಿದೆ. ಈ ಹಿಂದೆ ಮುರುಘಾ ಶ್ರೀಗೆ ಹೈಕೋರ್ಟ್ ಜಾಮೀನು ನೀಡಿತ್ತು. ಈ ವೇಳೆ ಜಾಮೀನನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನೆ ಮಾಡಲಾಗಿತ್ತು.
ಆರೋಪಿ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ಜಾಮೀನು ರದ್ದುಗೊಳಿಸಬೇಕೆಂದು ಮನವಿ ಮಾಡಲಾಗಿತ್ತು. ಈ ಅರ್ಜಿಯನ್ನು ಪುರಸ್ಕರಿಸಿದ ಸುಪ್ರೀಂಕೋರ್ಟ್ ಸಾಕ್ಷ್ಯಗಳ ವಿಚಾರಣೆ ಪೂರ್ಣಗೊಳಿಸಬೇಕು. ಅಷ್ಟೇ ಅಲ್ಲದೇ ಸಾಕ್ಷ್ಯಗಳ ವಿಚಾರಣೆ ಪೂರ್ಣಗೊಳಿಸುವವರೆಗೂ ಬಂಧನದಲ್ಲಿಡುವಂತೆ ಆದೇಶ ನೀಡಿತ್ತು.
ಇದೀಗ ಸಾಕ್ಷ್ಯಗಳ ವಿಚಾರಣೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಕೋರ್ಟ್ ಇಂದೇ ಬಿಡುಗಡೆ ಮಾಡಲು ಆದೇಶ ಹೊರಡಿಸಿದೆ.
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…
ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…
ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…
ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…