ಬೆಂಗಳೂರು: ಮಧ್ಯರಾತ್ರಿಯಿಂದಲೇ ಎಲ್ಲೆಡೆ ಕ್ರಿಸ್‌ಮಸ್ ಸಡಗರ ಮನೆ ಮಾಡಿದೆ. ಪ್ರತಿ ವರ್ಷದಂತೆ ಈ ವರ್ಷವು ಸಹ ಕ್ರಿಸ್‌ಮಸ್ ಹಬ್ಬವು ನಂಬಿಕೆಯೆಂಬ ಪ್ರೀತಿಯ ಸಂಕೇತವಾಗಿದೆ. ಅದೇ ರೀತಿಯಾಗಿ ಈ ಶುಭದಿನದಂದು ಚರ್ಚ್‌ಗಳು, ಪ್ರಾರ್ಥನಾ ಮಂದಿರಗಳಲ್ಲಿ ಜನರು ಪ್ರಾರ್ಥನೆ ಸಲ್ಲಿಸುತ್ತಿದ್ದು, ಸಂತೋಷದಿಂದ ಆಚರಿಸುತ್ತಿದ್ದಾರೆ .
ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ಚರ್ಚ್‌ಗಳು ಪ್ರತಿ ವರ್ಷದಂತೆ ಈ ವರ್ಷವು ಸಹ ಬಣ್ಣ ಬಣ್ಣದ ಲೈಟ್‌ಗಳಿಂದ ಕಂಗೊಳಿಸುತ್ತಿದ್ದು, ನೋಡುಗರ ಕಣ್ಮನ ಸೆಳೆಯುವಂತಿವೆ. ಇನ್ನೊಂದು ಕಡೆ ಪುಟಾಣಿಗಳು ಚರ್ಚ್‌ಗಳಲ್ಲಿ ಹಾಗೂ ಮನೆಗಳಲ್ಲಿ ಫೋಟೋ ಕ್ಲಿಕ್ಕಿಸಿಕೊಂಡು, ಗಿಫ್ಟ್ ಗಳನ್ನು ಪಡೆದು ಹಬ್ಬದ ಸಂಭ್ರಮದಲ್ಲಿದ್ದಾರೆ.
ದೇಶಾದ್ಯಂತ ಚರ್ಚ್‌ಗಳಲ್ಲಿ ಕ್ರಿಸ್‌ಮಸ್ ಆಚರಣೆಯನ್ನು ಮಾಡುತ್ತಿದ್ದು, ಒಂದು ಕಡೆ ಪ್ರಾರ್ಥನೆಯಾದರೆ, ಇನ್ನೊಂದು ಕಡೆ ಕ್ರಿಸ್ತನ ಹುಟ್ಟು ಗೋದಲಿಯ ರೂಪದಲ್ಲಿ ನಿರ್ಮಿಸಿದ್ದಾರೆ.
ಹಾಗೆಯೇ ಕೇವಲ ಕ್ರೈಸ್ತರು ಮಾತ್ರವಲ್ಲದೆ ಬೇರೆ ಧರ್ಮದವರು ಸಹ ಈ ಸಂಭ್ರಮಾಚರಣೆಯಲ್ಲಿ ಭಾಗಿಯಾಗಿ ಸಂಭ್ರಮಿಸುತ್ತಿದ್ದಾರೆ.
ನಾಡಿನೆಲ್ಲೆಡೆ ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಗಣ್ಯಾತಿಗಣ್ಯರು ಜನತೆಗೆ ಹಬ್ಬದ ಶುಭಾಶಯ ಕೋರಿದ್ದಾರೆ.





