ರಾಜ್ಯ

ಎಲ್ಲೆಡೆ ಕ್ರಿಸ್‌ಮಸ್ ಹಬ್ಬದ ಸಂಭ್ರಮ: ಗಣ್ಯರಿಂದ ಶುಭಾಶಯಗಳ ಮಹಾಪೂರ

ಬೆಂಗಳೂರು: ಮಧ್ಯರಾತ್ರಿಯಿಂದಲೇ ಎಲ್ಲೆಡೆ ಕ್ರಿಸ್‌ಮಸ್‌ ಸಡಗರ ಮನೆ ಮಾಡಿದೆ. ಪ್ರತಿ ವರ್ಷದಂತೆ ಈ ವರ್ಷವು ಸಹ ಕ್ರಿಸ್‌ಮಸ್‌ ಹಬ್ಬವು ನಂಬಿಕೆಯೆಂಬ ಪ್ರೀತಿಯ ಸಂಕೇತವಾಗಿದೆ. ಅದೇ ರೀತಿಯಾಗಿ ಈ ಶುಭದಿನದಂದು ಚರ್ಚ್‌ಗಳು, ಪ್ರಾರ್ಥನಾ ಮಂದಿರಗಳಲ್ಲಿ ಜನರು ಪ್ರಾರ್ಥನೆ ಸಲ್ಲಿಸುತ್ತಿದ್ದು, ಸಂತೋಷದಿಂದ ಆಚರಿಸುತ್ತಿದ್ದಾರೆ .

ಕ್ರಿಸ್‌ಮಸ್‌ ಹಿನ್ನೆಲೆಯಲ್ಲಿ ಚರ್ಚ್‌ಗಳು ಪ್ರತಿ ವರ್ಷದಂತೆ ಈ ವರ್ಷವು ಸಹ ಬಣ್ಣ ಬಣ್ಣದ ಲೈಟ್‌ಗಳಿಂದ ಕಂಗೊಳಿಸುತ್ತಿದ್ದು, ನೋಡುಗರ ಕಣ್ಮನ ಸೆಳೆಯುವಂತಿವೆ. ಇನ್ನೊಂದು ಕಡೆ ಪುಟಾಣಿಗಳು ಚರ್ಚ್‌ಗಳಲ್ಲಿ ಹಾಗೂ ಮನೆಗಳಲ್ಲಿ ಫೋಟೋ ಕ್ಲಿಕ್ಕಿಸಿಕೊಂಡು, ಗಿಫ್ಟ್‌ ಗಳನ್ನು ಪಡೆದು ಹಬ್ಬದ ಸಂಭ್ರಮದಲ್ಲಿದ್ದಾರೆ.

ದೇಶಾದ್ಯಂತ ಚರ್ಚ್‌ಗಳಲ್ಲಿ ಕ್ರಿಸ್‌ಮಸ್ ಆಚರಣೆಯನ್ನು ಮಾಡುತ್ತಿದ್ದು, ಒಂದು ಕಡೆ ಪ್ರಾರ್ಥನೆಯಾದರೆ, ಇನ್ನೊಂದು ಕಡೆ ಕ್ರಿಸ್ತನ ಹುಟ್ಟು ಗೋದಲಿಯ ರೂಪದಲ್ಲಿ ನಿರ್ಮಿಸಿದ್ದಾರೆ.

ಹಾಗೆಯೇ ಕೇವಲ ಕ್ರೈಸ್ತರು ಮಾತ್ರವಲ್ಲದೆ ಬೇರೆ ಧರ್ಮದವರು ಸಹ ಈ ಸಂಭ್ರಮಾಚರಣೆಯಲ್ಲಿ ಭಾಗಿಯಾಗಿ ಸಂಭ್ರಮಿಸುತ್ತಿದ್ದಾರೆ.

ನಾಡಿನೆಲ್ಲೆಡೆ ಕ್ರಿಸ್‌ಮಸ್‌ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಗಣ್ಯಾತಿಗಣ್ಯರು ಜನತೆಗೆ ಹಬ್ಬದ ಶುಭಾಶಯ ಕೋರಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…

6 hours ago

ಮತ್ತೆ ಹೊರ್ಮುಜ್‌ ಬಂದ್‌ ಮಾಡಿದ ಇರಾನ್‌

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು…

6 hours ago

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

7 hours ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

8 hours ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

10 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

12 hours ago