ಬೆಂಗಳೂರು : ರಾಜ್ಯವನ್ನೇ ಬೆಚ್ಚಿಬೀಳಿಸಿದ ಹೆಣ್ಣು ಭೂಣ್ರ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ದೂರವಾಣಿ ಮೂಲಕ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ಗೆ ಸೂಚನೆ ನೀಡಿದ್ದಾರೆ.
ಭ್ರೂಣ ಪತ್ತೆ ಮತ್ತು ಹತ್ಯೆ ಕೇಸ್ನಲ್ಲಿ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಪ್ರಕರಣ ತಿಳಿದು ಬಂದ ನಂತರ ಮಾತಾ ಆಸ್ಪತ್ರೆ ಮುಂಭಾಗ ಹಳೇ ನೋಟಿಸ್ ಅಂಟಿಸುವ ಮೂಲಕ ಕರ್ತವ್ಯಲೋಪದಡಿ ಮೈಸೂರು ಟಿಹೆಚ್ಒ ರಾಜೇಶ್ವರಿ ಎಂಬುವವರನ್ನು ಅಮಾನತು ಮಾಡಲಾಗಿದೆ.
ನಮ್ಮ ಇಲಾಖೆಯಲ್ಲಿ ಲೋಪವಾಗಿದೆ:
ಹೆಣ್ಣು ಭೃೂಣ ಹತ್ಯೆ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್, ಭ್ರೂಣ ಹತ್ಯೆ ತಡೆಯಲು ಅಧಿಕಾರಿಗಳು ವಿಫಲ ಆಗಿದ್ದಾರೆ. ನಮ್ಮ ಇಲಾಖೆಯಲ್ಲಿ ಆಗಿರುವ ಲೋಪದ ಬಗ್ಗೆ ಮುಚ್ಚುಮರೆ ಇಲ್ಲ. ಯಾರೇ ತಪ್ಪು ಮಾಡಿದ್ದರು ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಲಾಗುತ್ತದೆ. ಯಾವುದೇ ಮುಲಾಜು ನೋಡಬೇಡಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ಎಂದರು.





