ರಾಜ್ಯ

ಮಕ್ಕಳಿಗೆ ನೀರು ಕುಡಿಯುವಂತೆ ನೆನಪಿಸಲು ಎಲ್ಲಾ ಶಾಲೆಗಳಲ್ಲಿ ವಾಟರ್‌ ಬೆಲ್‌ ಬಾರಿಸಲು ಸುತ್ತೋಲೆ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಲ್ಲಿ ಮಕ್ಕಳಿಗೆ ನೀರು ಕುಡಿಯುವುದನ್ನು ನೆನಪಿಸಲು ವಾಟರ್‌ ಬೆಲ್‌ ಬಾರಿಸಬೇಕು. ಈ ಕುರಿತಾಗಿ ಶಿಕ್ಷಣ ಇಲಾಖೆ ವತಿಯಿಂದ ಸುತ್ತೋಲೆ ಹೊರಡಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ ತಿಳಿಸಿದ್ದಾರೆ.

ಇದನ್ನು ಓದಿ: ಶುದ್ಧ ಕುಡಿಯುವ ನೀರಿನ ಯೋಜನೆ ಉದ್ಘಾಟಿಸಿದ ಸಿಎಂ

ಶಾಲಾ ಶಿಕ್ಷಣ ಇಲಾಖೆ ಆಯುಕ್ತರಿಗೆ ಈ ಕುರಿತಾಗಿ ಅವರು ಪತ್ರ ಬರೆದಿದ್ದಾರೆ. ಮಕ್ಕಳಲ್ಲಿ ಆಗಾಗ ನೀರು ಕುಡಿಯಬೇಕೆಂಬ ಅರಿವು ಇರುವುದಿಲ್ಲ. ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಶಾಲೆಗಳಲ್ಲಿ ನೀರು ಕುಡಿಯುವುದನ್ನು ನೆನಪಿಸಲು ವಾಟರ್‌ ಬೆಲ್‌ ಬಾರಿಸಬೇಕು.

ಇದು ಮಕ್ಕಳ ದೇಹದ ಉಷ್ಣತೆ ನಿಯಂತ್ರಿಸುವ ಜೊತೆಗೆ ಆಹಾರ ಜೀರ್ಣಿಸಿಕೊಳ್ಳಲು ಸಹಾಯಕವಾಗಲಿದೆ. ಹೀಗಾಗಿ ಎಲ್ಲಾ ಶಾಲೆಗಳಲ್ಲಿ ವಾಟರ್‌ ಬೆಲ್‌ ಬಾರಿಸುವ ನಿಯಮ ಅನುಷ್ಠಾನಕ್ಕೆ ಸುತ್ತೋಲೆ ಹೊರಡಿಸಬೇಕೆಂದು ಪತ್ರದಲ್ಲಿ ಕೋರಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬಾವಿ ನೀರಿಗಾಗಿ ಅನಸೂಯ ಅವಿಸ್ಮರಣೀಯ ಹೋರಾಟ

ಆನಂದ್ ತೇಲ್ತುಂಬ್ಡೆ ಅಮ್ಮನೂ ಹೋರಾಟಗಾರರು! ವಿ.ಎಲ್.ನರಸಿಂಹಮೂರ್ತಿ ಹೆಸರಾಂತ ಚಿಂತಕ, ಮಾನವ ಮಾನವ ಹಕ್ಕುಗಳ 'ಹೋರಾಟ ಗಾರ ಡಾ.ಆನಂದ್ ತೇಲ್ತುಂಬ್ಡೆಯವರ ತಾಯಿ…

1 hour ago

ಆಂದೋಲನ ಸಂಪಾದಕೀಯ | ರೈಲ್ವೆ ಇಲಾಖೆಗೆ ಕನ್ನಡ, ಕನ್ನಡಿಗರ ಬಗ್ಗೆ ತಾತ್ಸಾರ ಸಲ್ಲದು

ರೈಲ್ವೆ ಇಲಾಖೆಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂಬುದು ಇಂದು ನಿನ್ನೆಯ ಆರೋಪವಲ್ಲ. ಮೊದಲಿನಿಂದಲೂ ಈ ಆರೋಪ ಇದೆ. ರೈಲ್ವೆಯಲ್ಲಿ ಸ್ಥಳೀಯರಿಗೆ ಉದ್ಯೋಗದಲ್ಲಿ…

2 hours ago

ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ : ನಾಲ್ವರು ಸ್ಥಳದಲ್ಲೇ ಸಾವು

ರಾಮನಗರ : ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ ದುರ್ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ವ್ಯಾಪ್ತಿಯಲ್ಲಿ…

2 hours ago

ಗ್ಯಾಸ್‌ ಸಿಲಿಂಡರ್ ಅಭಾವ : ಗ್ರಾಹಕರ ಕಿಸೆಗೆ ಕತ್ತರಿ

ಹಲವು ಹೋಟೆಲ್‌ಗಳಲ್ಲಿ ತಿಂಡಿಗಳ ಬೆಲೆ ಶೇ.5 ಹೆಚ್ಚಳ ಫಾಸ್ಟ್ ಫುಡ್, ಜಂಕ್‌ಫುಡ್‌ಗಳ ದರವೂ ಗಗನಮುಖಿ   • ಚಿರಂಜೀವಿ ಸಿ…

2 hours ago

ಶತಮಾನ ಕಳೆದರೂ ಹೊಸತನ ಮೆರೆವ ಶಾಲೆ!

• ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ಹತ್ತಿರತ್ತಿರ ಒಂದೂ ಕಾಲು ಶತಮಾನದ ಚಿರನೂತನ ಶಾಲೆ... ವೃದ್ಧಾಪ್ಯದಲ್ಲೂ ಆಧುನಿಕ ತಂತ್ರಜ್ಞಾನಕ್ಕೆ ತೆರೆದುಕೊಂಡು…

2 hours ago

ಸಿದ್ದಾಪುರ | ಉಪಟಳ ನೀಡುತ್ತಿದ್ದ ಒಂಟಿ ಸಲಗ ಸೆರೆ

ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…

12 hours ago