ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಲ್ಲಿ ಮಕ್ಕಳಿಗೆ ನೀರು ಕುಡಿಯುವುದನ್ನು ನೆನಪಿಸಲು ವಾಟರ್ ಬೆಲ್ ಬಾರಿಸಬೇಕು. ಈ ಕುರಿತಾಗಿ ಶಿಕ್ಷಣ ಇಲಾಖೆ ವತಿಯಿಂದ ಸುತ್ತೋಲೆ ಹೊರಡಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ ತಿಳಿಸಿದ್ದಾರೆ.
ಇದನ್ನು ಓದಿ: ಶುದ್ಧ ಕುಡಿಯುವ ನೀರಿನ ಯೋಜನೆ ಉದ್ಘಾಟಿಸಿದ ಸಿಎಂ
ಶಾಲಾ ಶಿಕ್ಷಣ ಇಲಾಖೆ ಆಯುಕ್ತರಿಗೆ ಈ ಕುರಿತಾಗಿ ಅವರು ಪತ್ರ ಬರೆದಿದ್ದಾರೆ. ಮಕ್ಕಳಲ್ಲಿ ಆಗಾಗ ನೀರು ಕುಡಿಯಬೇಕೆಂಬ ಅರಿವು ಇರುವುದಿಲ್ಲ. ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಶಾಲೆಗಳಲ್ಲಿ ನೀರು ಕುಡಿಯುವುದನ್ನು ನೆನಪಿಸಲು ವಾಟರ್ ಬೆಲ್ ಬಾರಿಸಬೇಕು.
ಇದು ಮಕ್ಕಳ ದೇಹದ ಉಷ್ಣತೆ ನಿಯಂತ್ರಿಸುವ ಜೊತೆಗೆ ಆಹಾರ ಜೀರ್ಣಿಸಿಕೊಳ್ಳಲು ಸಹಾಯಕವಾಗಲಿದೆ. ಹೀಗಾಗಿ ಎಲ್ಲಾ ಶಾಲೆಗಳಲ್ಲಿ ವಾಟರ್ ಬೆಲ್ ಬಾರಿಸುವ ನಿಯಮ ಅನುಷ್ಠಾನಕ್ಕೆ ಸುತ್ತೋಲೆ ಹೊರಡಿಸಬೇಕೆಂದು ಪತ್ರದಲ್ಲಿ ಕೋರಿದ್ದಾರೆ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…