ರಾಜ್ಯ

ನಾಗರಿಕತೆ ಬೆಳೆದದ್ದು-ಉಳಿದಿರುವುದು ನೀರಿನಿಂದಲೇ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕೆರೆಗಳಿಗೆ ನೀರು ತುಂಬಿಸುವುದರಲ್ಲಿ ಏಷ್ಯಾದಲ್ಲೇ ಉತ್ತಮ‌ ಕಾರ್ಯ ನಮ್ಮ ರಾಜ್ಯದಲ್ಲಿ ಆಗುತ್ತಿದೆ ಎಂದು ಮುಖ್ಯಮಂತ್ರಿ ಸಿ.ಎಂ.ಸಿದ್ದರಾಮಯ್ಯ ಅವರು ಮೆಚ್ಚುಗೆ ಸೂಚಿಸಿದರು.

ಸಣ್ಣ ನೀರಾವರಿ ಇಲಾಖೆ ಬ್ಯಾಂಕ್ವೆಂಟ್ ಹಾಲ್ ನಲ್ಲಿ ಆಯೋಜಿಸಿದ್ದ “ನೀರಿದ್ದರೆ ನಾಳೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಾಗರಿಕತೆ ಬೆಳೆದದ್ದು-ಉಳಿದಿರುವುದು ನೀರಿನಿಂದಲೇ. ಜನರಲ್ಲಿ ನೀರಿನ ಬಳಕೆ, ನೀರಿನ ಮೌಲ್ಯ ಮತ್ತು ಅಂತರ್ಜಲ ವೃದ್ಧಿ ಬಗ್ಗೆ ಸಚಿವ ಬೋಸರಾಜು ಅವರು ಇಲಾಖಾ ವತಿಯಿಂದ ಉತ್ತಮ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದಾರೆ. ಇದು ಆರೋಗ್ಯಕರ ಸಂಗತಿ. ಜನರಿಗೆ ನೀರಿನ ಅಗತ್ಯ ಮತ್ತು ನೀರಿನ ಸ್ಥಿತಿ ಗತಿ ಬಗ್ಗೆ ಸಾರ್ವಜನಿಕರಿಗೆ ಮನವರಿಕೆ ಮಾಡಿಸಬೇಕು ಎಂದು ಕರೆ ನೀಡಿದರು.

ರಾಜ್ಯದಲ್ಲಿ 37 ಲಕ್ಷ ಬೋರ್ ವೆಲ್ ಗಳ ಮೂಲಕ ಅಂತರ್ಜಲ ಬಳಕೆ ಆಗುತ್ತಿದೆ. ದಾಖಲೆಗಳಲ್ಲಿ ಇಲ್ಲದ ಲಕ್ಷಾಂತರ ಅನಧಿಕೃತ ಬೋರ್ ವೆಲ್ ಗಳೂ ಇವೆ. ರಾಷ್ಟ್ರೀಯ ಸರಾಸರಿಗಿಂತ ಶೇ8 ರಷ್ಟು ಹೆಚ್ಚಿನ‌ ಬಳಕೆ ಆಗುತ್ತಿದೆ ಎನ್ನುವ ವರದಿಗಳಿವೆ ಎಂದು ವಿವರಿಸಿದರು.

ಇದನ್ನೂ ಓದಿ:-ಪಚ್ಚೆದೊಡ್ಡಿ ಹುಲಿ ಹತ್ಯೆ ಪ್ರಕರಣ : ಆರೋಪಿ ಅರಣ್ಯ ಇಲಾಖೆ ಕಸ್ಟಡಿಗೆ

144 ತಾಲ್ಲೂಕುಗಳನ್ನು ಹೊರತು ಪಡಿಸಿ ಉಳಿದ ತಾಲ್ಲೂಕುಗಳಲ್ಲಿ ನೀರಿನ , ಅಂತರ್ಜಲದ ಪ್ರಮಾಣ ಕೊರತೆ ಇದೆ. ಈ ಕಾರಣಕ್ಕೇ ಕೋಲಾರ ಮತ್ತು ಚಿಕ್ಕಬಳ್ಳಾಪುರದ ಕೆರೆಗಳನ್ನು ತುಂಬಿಸುವ ಕೆ.ಸಿ.ವ್ಯಾಲ್ಯೂ ಯೋಜನೆ ಜಾರಿ ಮಾಡಲಾಯ್ತು. ಇದರಿಂದ ಈಗ ಅಂತರ್ಜಲ ವೃದ್ಧಿಯಾಗಿದೆ. ಆದರೆ ಇದನ್ನೂ ವಿರೋಧಿಸುವವರು ಇದ್ದಾರೆ ಎಂದು ವಿವರಿಸಿದರು.

ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಅಂತರ್ಜಲ ವೃದ್ಧಿಗೆ ಸಾವಿರಾರು ಕೋಟಿ ಖರ್ಚು ಮಾಡಿದ್ದೇವೆ. ಇದರಿಂದ ಅಂತರ್ಜಲ ಉತ್ತಮವಾಗಿ ವೃದ್ಧಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಕಾನೂನು ಸಚಿವರಾದ ಹೆಚ್.ಕೆ.ಪಾಟೀಲ್, ಸಣ್ಣ ನೀರಾವರಿ ಸಚಿವರಾದ ಎನ್.ಎಸ್.ಬೋಸರಾಜು, ಅರಣ್ಯ ಮತ್ತು ಪರಿಸರ ಖಾತೆ ಸಚಿವರಾದ ಈಶ್ವರ್ ಖಂಡ್ರೆ, ಕೆಕೆಆರ್ ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್, ಮ್ಯಾಗ್ಸೆಸ್ಸೇ ಪ್ರಶಸ್ತಿ ಪುರಸ್ಕೃತ ಪರಿಸರವಾದಿ ರಾಜೇದ್ರ ಸಿಂಗ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಚಾ.ನಗರ | ಬೇಡರಪುರದಲ್ಲಿ ಮತ್ತೊಂದು ಚಿರತೆ ಸೆರೆ

ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…

2 hours ago

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸಿ : ಡಿಸಿ, ಸಿಇಓಗಳಿಗೆ ಮಧು ಬಂಗಾರಪ್ಪ ಸೂಚನೆ

ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…

2 hours ago

ಕಾರು-ಬೈಕ್‌ ನಡುರೆ ಭೀಕರ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು

ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…

3 hours ago

ವಾಣಿಜ್ಯ ಬಳಕೆಯ ಸಿಲಿಂಡರ್‌ ಪೂರೈಕೆಯಲ್ಲಿ ಶೇ20 ರಷ್ಟು ಹೆಚ್ಚಳ

ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…

3 hours ago

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…

4 hours ago

ಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರ್ಕಾರ : ಪುನರ್‌ ಪರಿಶೀಲನೆಗೆ ಒತ್ತಾಯ

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…

4 hours ago