Mysore
23
clear sky

Social Media

ಮಂಗಳವಾರ, 18 ಆಗಸ್ಟ್ 2026
Light
Dark

ಸಿಟಿ ರವಿ-ಲಕ್ಷ್ಮೀ ಹೆಬ್ಬಾಳ್ಕರ್‌ ಪ್ರಕರಣ | ಸದನದ ಪರಿಮಿತಿಯಲ್ಲಿ ಕ್ರಮ ಎಂದ ಹೊರಟ್ಟಿ

ದಾವಣಗೆರೆ: ವಿಧಾನ ಪರಿಷತ್‌ ಕಲಾಪದ ವೇಳೆ ಆದ ಘಟನೆಗೆ ಸಂಬಂಧಿಸಿದಂತೆ ಬಿಜೆಪಿಯ ಪರಿಷತ್‌ ಸದಸ್ಯ ಸಿಟಿ ರವಿ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಇಬ್ಬರು ದೂರು ನೀಡಿದ್ದಾರೆ. ಇಬ್ಬರ ದೂರನ್ನು ಪರಿಗಣಿಸಿ ಸದನದ ಪರಿಮಿತಿಯಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.19 ರಂದು ಸದನದ ಕಲಾಪದ ವೇಳೆ ಆದ ಘಟನೆಯನ್ನು ಗಮನಿಸಿದ್ದೇನೆ. ಆ ಕುರಿತಂತೆ ದಾಖಲೆಗಳನ್ನು ಪರಿಶೀಲಿಸಿದ್ದೇನೆ. ಇದನ್ನು ಬೆಳೆಸುವ ಬದಲು ಇಲ್ಲಿಗೆ ಮುಗಿಸಿದರೆ ಒಳ್ಳೆಯದು ಎಂದು ಹೇಳಿದ್ದಾರೆ.

ವಿಧಾನ ಪರಿಷತ್‌ನಲ್ಲಿರುವ ಸಿಸಿಟಿವಿ ಕ್ಯಾಮೆರಾಗಳು, ಅಧಿಕೃತ ದಾಖಲೆಗಳು, ಖಾಸಗಿ ಸುದ್ದಿವಾಹಿನಿಯಲ್ಲಿ ಬಿತ್ತರವಾದ ದೃಶ್ಯಗಳ ಬಗ್ಗೆ ನನಗೆ ಮಾಹಿತಿ ಇಲ್ಲ. ಇವುಗಳ ಬಗ್ಗೆ ಏನಾದರು ದಾಖಲೆಗಳನ್ನು ನೀಡಿದರೆ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿ ಖಚಿತಪಡಿಸಿಕೊಳ್ಳಲಾಗುವುದು ಎಂದರು.

Tags:
error: Content is protected !!