ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಮತ್ತೊಂದು ಶಾಕ್ ಎದುರಾಗಿದೆ.
ಕಾಲ್ತುಳಿತ ಪ್ರಕರಣ ನಡೆಯಲು ರಾಜ್ಯ ಸರ್ಕಾರವೇ ಕಾರಣ ಎಂದು ಗಂಭೀರ ಆರೋಪ ಮಾಡಿರುವ ನಾಗರಿಕ ಹಕ್ಕುಗಳ ಸಂಸ್ಥೆಯು ರಾಜ್ಯಪಾಲರಿಗೆ ಪತ್ರ ಬರೆದಿದೆ.
ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರದ ಬರೆದಿರುವ ನಾಗರಿಕ ಹಕ್ಕುಗಳ ಸಂಸ್ಥೆಯು, ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ಪೂರ್ಣವಾಗುವವರೆಗೂ ಸರ್ಕಾರವನ್ನು ಅಮಾನತಿನಲ್ಲಿಡಿ ಎಂದು ಮನವಿ ಮಾಡಿದೆ.
ಇದನ್ನೂ ಓದಿ:- ಕಾಲ್ತುಳಿತ ದುರಂತ ಪ್ರಕರಣ: ಕೆಎಸ್‌ಸಿಎ ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಆರ್‌ಸಿಬಿ ಅಭಿಮಾನಿಗಳು ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಂಭೀರ ಗಾಯಗೊಂಡಿರುವ ಅಭಿಮಾನಿಗಳಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಈ ಘಟನೆಯು ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ ಎನ್ನಲಾಗುತ್ತಿದೆ.





