Mysore
17
clear sky

Social Media

ಶುಕ್ರವಾರ, 23 ಜನವರಿ 2026
Light
Dark

2 ಗುಂಪುಗಳ ಮಧ್ಯೆ ಮಾರಾಮಾರಿ: ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ

ಚಿಕ್ಕಮಗಳೂರು: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್‌ ಕಾರ್ಯಕರ್ತ ಮೃತಪಟ್ಟ ಘಟನೆ ಕಡೂರು ತಾಲ್ಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ವರ ಮಠದ ಬಳಿ ನಡೆದಿದೆ.

ಗಣೇಶ್‌ ಗೌಡ ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ.

ಕೊಲೆಗೂ ಮುನ್ನ ಶುಕ್ರವಾರ ರಾರ್ತಿ 10.30ರ ವೇಳೆ ಸಖರಾಯಪಟ್ಟಣ ಬಾರ್‌ ಬಳಿ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿತ್ತು. ಬಾರ್‌ ಬಳಿ ಗಲಾಟೆ ನಡೆದ ಅರ್ಧ ಗಂಟೆ ನಂತರ ಮಠದ ಬಳಿ ಮತ್ತೆ ಗಲಾಟೆ ನಡೆದಿದೆ. ಈ ಗಲಾಟೆ ವಿಕೋಪಕ್ಕೆ ಹೋಗಿ ಮಚ್ಚಿನಿಂದ ಗಣೇಶ್‌ ಮೇಲೆ ಹಲ್ಲೆ ನಡೆದು ಹತ್ಯೆ ಮಾಡಲಾಗಿದೆ.

ಎದುರಾಳಿ ಗುಂಪಿನ ಇಬ್ಬರ ತಲೆಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಖರಾಯಪಟ್ಟಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:
error: Content is protected !!