ಕಲಬುರ್ಗಿ: 10 ನೇ ತರಗತಿ ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ.
ಜಿಲ್ಲೆಯ ಆಳಂದ ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಯ ದೊಡ್ಡಪ್ಪನ ಮಗನೇ ಕೃತ್ಯ ಎಸಗಿರುವುದಾಗಿ ಬಯಲಾಗಿದೆ. ಅಲ್ಲದೇ ಪ್ರಕರಣ ಸಂಬಂಧ ಆರೋಪಿ ಅಣ್ಣನನ್ನು ಕೂಡ ಆಳಂದ ಪೊಲೀಸರು ಬಂಧಿಸಿದ್ದಾರೆ.
ವಿದ್ಯಾರ್ಥಿನಿ ಕಲಬುರಗಿ ಜಿಲ್ಲೆಯಲ್ಲಿರುವ ವಸತಿ ಶಾಲೆಯೊಂದರಲ್ಲಿ ಓದುತ್ತಿದ್ದಳು. ಶಾಲೆಗೆ ರಜೆ ಇದ್ದಾಗೆಲ್ಲ ಆಕೆ ಮನೆಗೆ ಬರುತ್ತಿದ್ದಳು. ಹೀಗೆ ಬಂದಾಗ ಸಹೋದರ ಆಕೆಯನ್ನು ಬಳಸಿಕೊಳ್ಳುತ್ತಿದ್ದನು.
ರಾತ್ರಿ ಹೊತ್ತು ಮನೆಯಲ್ಲಿ ಎಲ್ಲರೂ ಮಲಗಿದ್ದಾಗ ಆತ ತಂಗಿ ಎನ್ನುವುದನ್ನೂ ನೋಡದೇ ರೇಪ್ ಮಾಡುತ್ತಿದ್ದ. ಹೀಗೆ ಕಳೆದ ಮಾರ್ಚ್ ನಿಂದ ವಿದ್ಯಾರ್ಥಿನಿ ಹಲವು ಬಾರಿ ತನ್ನ ಅಣ್ಣನಿಂದ ಅತ್ಯಾಚಾರಕ್ಕೆ ಒಳಗಾಗಿದ್ದಳು.
ಅಲ್ಲದೇ ಈ ವಿಚಾರವನ್ನು ಬಾಯಿಬಿಟ್ಟರೆ ಕೊಲೆ ಮಾಡುವ ಬೆದರಿಕೆಯನ್ನು ಕೂಡ ಹಾಕಿದ್ದನು. ಹೀಗಾಗಿ ಆಕೆ ಅತ್ಯಾಚಾರ ವಿಚಾರವನ್ನು ಮುಚ್ಚಿಟ್ಟಿದ್ದಳು.
ಇತ್ತ ವಿದ್ಯಾರ್ಥಿನಿ ದಪ್ಪ ಇರೋದ್ರಿಂದ ಕುಟುಂಬಸ್ಥರು ಕೂಡ ಆಕೆಯ ದೇಹದಲ್ಲಿ ಆಗುತ್ತಿರುವ ಬದಲಾವಣೆ ಕಂಡು ಹಿಡಿಯುವ ಪ್ರಯತ್ನ ಮಾಡಿಲ್ಲ. ಆದರೆ ಡಿಸೆಂಬರ್ 24 ರಂದು ಶಾಲೆಯಲ್ಲಿ ಇದ್ದಾಗ ಆಕೆಗೆ ಜೋರಾಗಿ ಹೊಟ್ಟೆ ನೋವು ಕಾಣಿಸಿಕೊಂಡಿದೆ.
ಹೀಗಾಗಿ ಶಿಕ್ಷಕರಿಗೆ ಹೇಳಿ ಆಕೆ ಸಂಬಂಧಿಕರ ಮನೆಗೆ ತೆರಳಿದ್ದಾಳೆ. ನಂತರ ಸಂಬಂಧಿಕರು ವಿದ್ಯಾರ್ಥಿನಿ ಕುಟಂಬದವರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಆಕೆಯನ್ನು ಮಹಾರಾಷ್ಟ್ರದ ಸೊಲ್ಲಾಪುರದ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಯಿತು.
ಚಿಕತ್ಸೆಗೆ ದಾಖಲು ಮಾಡುತ್ತಿದ್ದಂತೆಯೇ ಆಕೆ ಗಂಡು ಮಗುವಿಗೆ ಜನ್ಮ ಕೊಟ್ಟಿದ್ದಾಳೆ. ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮ ಕೊಟ್ಟಿರುವ ವಿಚಾರ ಗೊತ್ತಾಗ್ತಿದ್ದಂತೆ ಕುಟುಂಬಸ್ಥರು ಕೂಡ ಶಾಕ್ ಆಗಿದ್ದಾರೆ.
ಈಕೆಗೆ ಮದುವೆಯೇ ಆಗಿಲ್ಲ ಮಗುವಿಗೆ ಜನ್ಮ ಅಂದ್ರೆ ಹೇಗೆ ಅಂತಾ ಮಾತಾಡಿಕೊಳ್ಳಲು ಆರಂಭಿಸಿದರು. ಬಳಿಕ ಆಸ್ಪತ್ರೆಯವರು ಮಹಾರಾಷ್ಟ್ರದ ಪೊಲೀಸರಿಗೆ ಮಾಹಿತಿ ರವಾನೆ ಮಾಡಿದರು.
ಮಹಾರಾಷ್ಟ್ರ ಪೊಲೀಸರು ನಿಂಬರ್ಗಾ ಪೊಲೀಸರನ್ನು ಸಂಪರ್ಕ ಮಾಡಿ ನಿಂಬರ್ಗಾ ಪೊಲೀಸರು ವಿದ್ಯಾರ್ಥಿನಿಯ ವಿಚಾರಣೆ ನಡೆಸಿದರು. ಈ ವೇಳೆ ಅಣ್ಣನಿಂದ ಕೃತ್ಯ ಆಗಿರುವುದು ಬಯಲಾಗಿದೆ.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…