ಹುಬ್ಬಳ್ಳಿ: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಕ್ಲೀನ್‌ಚಿಟ್ ಸಿಕ್ಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದು, ಇದು ನಿರೀಕ್ಷಿತ ತೀರ್ಪು ಎಂದು ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತ ತನಿಖೆಯಲ್ಲಿ ಕ್ಲೀನ್ ಚಿಟ್ ಸಿಗುತ್ತೆ ಎಂದು ಮೊದಲೇ ಗೊತ್ತಿತ್ತು. ಅದಕ್ಕಾಗಿಯೇ ನಾವು ಸಿಬಿಐ ತನಿಖೆಗೆ ಆಗ್ರಹಿಸಿದ್ದೆವು ಎಂದರು.
ಮೈಸೂರು ಮುಡಾ ಪ್ರಕರಣದಲ್ಲಿ ನಿರೀಕ್ಷೆಯಂತೆ ಸಿಎಂಗೆ ಕ್ಲೀನ್‌ಚಿಟ್ ಸಿಕ್ಕಿದೆ. ಲೋಕಾಯುಕ್ತದಲ್ಲಿ ಅಧಿಕಾರಿಗಳ ಪೋಸ್ಟಿಂಗ್ ಮಾಡುವುದು ಸಿಎಂ ಕೈಯಲ್ಲೇ ಇರುತ್ತದೆ. ಇದನ್ನು ಲೋಕಾಯುಕ್ತ ಪೊಲೀಸರಿಂದ ತನಿಖೆ ಮಾಡಿದ್ರೆ ಇದನ್ನು ಮುಚ್ಚಿ ಹಾಕುತ್ತಾರೆ ಎಂದು ಈ ಮೊದಲೇ ಹೇಳಿದ್ದೇ, ಈಗ ಅದೇ ಪರಿಸ್ಥಿತಿ ಆಗಿದೆ ಎಂದು ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ರಾತ್ರೋರಾತ್ರಿ ಅಧಿಕಾರಿಗಳನ್ನು ಯಾರೆಲ್ಲಾ ಭೇಟಿಯಾಗಿ ಬಂದಿದ್ದಾರೆ ಅನ್ನೋದು ಎಲ್ಲವೂ ಗೊತ್ತಿದೆ. ಇದೇನೂ ಆಶ್ಚರ್ಯಕರ ಸಂಗತಿ ಏನೂ ಅಲ್ಲ. ನಿಷ್ಪಕ್ಷಪಾತ ತನಿಖೆಯಾಗಬೇಕಾದರೆ ನೇರವಾಗಿ ಸಿಬಿಐ ತನಿಖೆ ಮಾಡಿಸಬೇಕು. ಆವಾಗ ಸತ್ಯಾಸತ್ಯತೆ ಗೊತ್ತಾಗಲಿದೆ ಎಂದರು.
ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…
ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…
ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…
ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ. ಕಳೆದ ವರ್ಷ…