ರಾಜ್ಯ

ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣ: ಬೆಂಗಳೂರಿನಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ ಕೆಲವೆಡೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.

ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಲಘು ಅಥವಾ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನು ಓದಿ: ಸೆಪ್ಟಂಬರ್‌ನಲ್ಲೂ ಹೆಚ್ಚು ಮಳೆ : ಪ್ರವಾಹ, ಭೂಕುಸಿತದ ಬಗ್ಗೆ ಎಚ್ಚರಿಕೆ ನೀಡಿದ ಹವಮಾನ ಇಲಾಖೆ

ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಬೆಳಗಾವಿ, ಬೀದರ್‌, ಬಾಗಲಕೋಟೆ, ವಿಜಯಪುರ, ಹಾವೇರಿ, ಗದಗ, ಧಾರವಾಡ, ಕಲಬುರ್ಗಿ, ಕೊಪ್ಪಳ, ಯಾದಗಿರಿ, ರಾಯಚೂರು, ವಿಜಯನಗರ ಜಿಲ್ಲೆಗಳಲ್ಲಿ ಸಂಪೂರ್ಣ ಒಣಹವೆ ಇರಲಿದೆ.

ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಮಳೆ ಸಾಧ್ಯತೆ ವಿರಳವಾಗಿರಲಿದೆ.

ಆಂದೋಲನ ಡೆಸ್ಕ್

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

11 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

13 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

14 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

18 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

23 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

23 hours ago