Mysore
28
light rain

Social Media

ಬುಧವಾರ, 25 ಜೂನ್ 2025
Light
Dark

ಸಿಎಂ, ಡಿಸಿಎಂ ಬೆಂಗಳೂರು ಸಿಟಿ ರೌಂಡ್ಸ್‌ ರದ್ದು: ವಿಡಿಯೋ ಕಾನ್ಫರೆನ್ಸ್‌ನಲ್ಲೇ ಜಲಾವೃತ ಪ್ರದೇಶಗಳ ವೀಕ್ಷಣೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಭಾರೀ ಮಳೆಯಾಗಿದ್ದು, ಹಲವು ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತವಾಗಿವೆ.

ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಸಿಟಿ ರೌಂಡ್ಸ್‌ ರದ್ದಾಗಿದ್ದು, ವಿಡಿಯೋ ಕಾನ್ಫರೆನ್ಸ್‌ ಮೂಲಕವೇ ಜಲಾವೃತ ಪ್ರದೇಶಗಳನ್ನು ವೀಕ್ಷಣೆ ಮಾಡಿದ್ದಾರೆ. ಮಳೆಹಾನಿ ಪ್ರದೇಶಕ್ಕೆ ತೆರಳದೇ ಮಳೆಹಾನಿ ಬಗ್ಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಕಲೆಹಾಕಿದ್ದಾರೆ.

ಬಿಬಿಎಂಪಿ ವಾರ್‌ರೂಂನಲ್ಲಿ ಮಳೆಹಾನಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಕಲೆಹಾಕಿದ ಸಿಎಂ ಸಿದ್ದರಾಮಯ್ಯ ಅವರು, ಮಳೆಹಾನಿ ಪ್ರದೇಶಗಳಲ್ಲಿ ಜನರಿಗೆ ಎಲ್ಲಾ ರೀತಿಯ ಸೌಲಭ್ಯ ಒದಗಿಸಬೇಕು. ಯಾರಿಗೂ ಕೂಡ ತೊಂದರೆಯಾಗದಂತೆ ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇನ್ನು ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ರಸ್ತೆಗಳು, ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿವೆ. ಧಾರಾಕಾರ ಮಳೆಯಿಂದಾಗಿ ಬೆಂಗಳೂರಿನ ಬಹುತೇಕ ಕಡೆ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

Tags:
error: Content is protected !!