ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾರೀ ಮಳೆಯಾಗಿದ್ದು, ಹಲವು ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತವಾಗಿವೆ.
ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸಿಟಿ ರೌಂಡ್ಸ್ ರದ್ದಾಗಿದ್ದು, ವಿಡಿಯೋ ಕಾನ್ಫರೆನ್ಸ್ ಮೂಲಕವೇ ಜಲಾವೃತ ಪ್ರದೇಶಗಳನ್ನು ವೀಕ್ಷಣೆ ಮಾಡಿದ್ದಾರೆ. ಮಳೆಹಾನಿ ಪ್ರದೇಶಕ್ಕೆ ತೆರಳದೇ ಮಳೆಹಾನಿ ಬಗ್ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಕಲೆಹಾಕಿದ್ದಾರೆ.
ಬಿಬಿಎಂಪಿ ವಾರ್‌ರೂಂನಲ್ಲಿ ಮಳೆಹಾನಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಕಲೆಹಾಕಿದ ಸಿಎಂ ಸಿದ್ದರಾಮಯ್ಯ ಅವರು, ಮಳೆಹಾನಿ ಪ್ರದೇಶಗಳಲ್ಲಿ ಜನರಿಗೆ ಎಲ್ಲಾ ರೀತಿಯ ಸೌಲಭ್ಯ ಒದಗಿಸಬೇಕು. ಯಾರಿಗೂ ಕೂಡ ತೊಂದರೆಯಾಗದಂತೆ ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ರಸ್ತೆಗಳು, ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿವೆ. ಧಾರಾಕಾರ ಮಳೆಯಿಂದಾಗಿ ಬೆಂಗಳೂರಿನ ಬಹುತೇಕ ಕಡೆ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…
ಟೆಹ್ರಾನ್ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…
ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…
ಬೈಲಕುಪ್ಪೆ : ನಿನ್ನೆ ರಾತ್ರಿ ನಡೆದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ…
ಹೈದರಬಾದ್ : ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ ಅವರು ನಿಧನರಾಗಿದ್ದಾರೆ. 85 ವರ್ಷದ ಸುವರ್ಣಲತಾ ಅವರು…