Mysore
29
clear sky

Social Media

ಗುರುವಾರ, 29 ಜನವರಿ 2026
Light
Dark

ಆಂಧ್ರಕ್ಕೆ ಕುಮ್ಕಿ ಆನೆ ಹಸ್ತಾಂತರಿಸಿದ ಸಿಎಂ, ಡಿಸಿಎಂ

kumki elephant

ಬೆಂಗಳೂರು : ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ರಾಜ್ಯದಿಂದ ಆಂಧ್ರ ಪ್ರದೇಶ ರಾಜ್ಯಕ್ಕೆ ಕುಮ್ಕಿ ಆನೆಗಳನ್ನು ಹಸ್ತಾಂತರಿಸುವ ಒಡಂಬಡಿಕೆಗೆ ಸಹಿ ಹಾಕಿ, ಆನೆಗಳನ್ನು ಹಸ್ತಾಂತರಿಸಿ ಮಾತನಾಡಿದರು.

ದೇಶದಲ್ಲೇ ಆನೆ ಸಂಪತ್ತು ಹೆಚ್ಚಾಗಿರುವ ರಾಜ್ಯ ನಮ್ಮದು. 3695 ಆನೆಗಳು ನಮ್ಮಲ್ಲಿವೆ ಎಂದರು.

ಮಾನವ, ಆನೆ ಸಂಘರ್ಷ ತಡೆಯುವುದರಿಂದ ಜೀವ ಹಾನಿ, ಬೆಳೆ ಹಾನಿ ತಪ್ಪುತ್ತದೆ. ಈ ಮಹತ್ವದ ಉದ್ದೇಶದಿಂದಲೇ ರಾಜ್ಯದಿಂದ ಆರು ಕುಮ್ಕಿ ಆನೆಗಳನ್ನು ಆಂಧ್ರಕ್ಕೆ ಹಸ್ತಾಂತರಿಸಲಾಗುತ್ತದೆ ಎಂದರು.

Tags:
error: Content is protected !!